Advertisement

ಮಲೇರಿಯಾ ವಿರೋಧಿ ಮಾಸಾಚರಣೆ ಜಾಥಾಕ್ಕೆ ಚಾಲನೆ

03:38 PM Jun 27, 2020 | Naveen |

ದೇವದುರ್ಗ: ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

Advertisement

ಜಾಥಾಕ್ಕೆ ಚಾಲನೆ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ ಮಾತನಾಡಿ, ಸೊಳ್ಳೆ ಜನ್ಯ ರೋಗಗಳಾದ ಮಲೇರಿಯಾ, ಡೆಂಘೀ ಜ್ವರ ಇತರೆ ಕಾಯಿಲೆಗಳ ಬಗ್ಗೆ ಜನರು ಎಚ್ಚರ ವಹಿಸಬೇಕು. ಮನೆ ಮತ್ತು ಸುತ್ತಲಿನ ಪರಿಸರದಲ್ಲಿ ಸೊಳ್ಳೆ ನೀರು ನಿಲ್ಲದಂತೆ ಮತ್ತು ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಮನೆಯಲ್ಲಿರುವ ಡ್ರಮ್‌, ಬ್ಯಾರಲ್‌, ಇತರೆ ಸಾಮಗ್ರಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಿ ಒಣಗಿಸಿ ನೀರು ತುಂಬಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಯಾವುದೇ ಜ್ವರ, ಇರಲಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದರು.

ಡಾ| ಹುಲಿಮನಿ, ಡಾ| ನಿರ್ಮಲ, ಓಂಕಾರ, ಶಿವಪ್ಪ, ಮೈನುದ್ದೀನ್‌, ಶರಣು ಸೇರಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next