Advertisement
ಯಾದಗಿರಿ ಜಿಲ್ಲೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಹೂವಿನಹೆಡಗಿ ಬಳಿ ಸೇತುವೆ ಮುಳುಗಡೆಯಾಗಲು ಅರ್ಧ ಅಡ್ಡಿ ಭಾಕಿ ಉಳಿದಿದೆ. ಕೃಷ್ಣಾ ನದಿಗೆ ಇನ್ನೂ ನೀರು ಬಿಡುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಲಾಗಿದೆ. ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಇದೀಗ ಮುಳುಗಡೆಯಾಗಿದೆ. ಕೊಪ್ಪರು ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ತಾಲೂಕು ಆಡಳಿತ ಕಟ್ಟೆಚ್ಚರ ಜತೆ ನದಿ ತೀರದ ಗ್ರಾಮಗಳಲ್ಲಿ ಡಂಗೂರ ಜಾಗೃತಿ ಮೂಡಿಸಲಾಗಿದೆ. ಜುಲೈ ಅಂತ್ಯದಿಂದ ಆಗಸ್ಟ್ ಎರಡನೇ ವಾರದವರೆಗೆ ಕೃಷ್ಣಾನದಿ ಅಬ್ಬರಕ್ಕೆ ನದಿ ತೀರದ ನಿವಾಸಿಗಳ ಬದುಕು ದಿಕ್ಕುತಪ್ಪಿತ್ತು. 15 ದಿನ ಪ್ರವಾಹದಿಂದ ನಲುಗಿದ ಕೃಷ್ಣಾ ನದಿ ತೀರದ ಮನೆಗಳು ಜಲಾವೃತವಾಗಿದ್ದವು. ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆ ಬೆಳೆ ಹಾನಿಗೀಡಾಗಿತ್ತು. ಮನೆ-ದನಕರಗಳನ್ನು ಬಿಟ್ಟು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ನದಿ ತೀರದ ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ತೆರಳಿ ಬದುಕು ಕಟ್ಟಿಕೊಳ್ಳುತ್ತಿರುವಾಗಲೇ ಮತ್ತೆ ಪ್ರವಾಹ ಭೀತಿ ಶುರುವಾಗಿದೆ.
Advertisement
ಕೃಷ್ಣಾ ತೀರದಲ್ಲಿ ಮತ್ತೆ ಪ್ರವಾಹ ಭೀತಿ
04:16 PM Sep 07, 2019 | Naveen |
Advertisement
Udayavani is now on Telegram. Click here to join our channel and stay updated with the latest news.