Advertisement

ನೀರಿನ ಸಮಸ್ಯೆಗೆ ಎಚ್ಛರ ವಹಿಸಿ

05:21 PM Mar 07, 2020 | Naveen |

ದೇವದುರ್ಗ: ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗೃತೆ ಕ್ರಮವಹಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್‌ ಮಧುರಾಜ ತಿಳಿಸಿದರು.

Advertisement

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಗ್ರಾಪಂ ಅಧಿಕಾರಿಗಳ ಸಭೆ ನಡೆಸಿ ಎಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ ಎನ್ನುವ ಮಾಹಿತಿ ಪಡೆಯಲಾಗಿದೆ. ಜಾನಮರಡಿ, ನಿಲವಂಜಿ, ಕ್ಯಾದಿಗೇರಾ, ಆಲ್ಕೋಡ, ಮಲ್ಲಾಪುರ, ಸಿಗೇರದೊಡ್ಡಿ ಸೇರಿ ಆರು ಗ್ರಾಮಗಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. ಹೀಗಾಗಿ ಈಗಾಗಲೇ ಬೇಕಾಗುವ ಅಗತ್ಯ ಕ್ರಮಗಳು ವಹಿಸಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಗ್ರಾಪಂ 14ನೇ ಹಣಕಾಸು ಯೋಜನೆಯಲ್ಲಿ ಕುಡಿಯುವ ನೀರಿಗಾಗಿ ಅನುದಾನ ಬಳಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಸ್ಯೆ ಇರುವ ಕಡೆ ಹೊಸದಾಗಿ ಕೊಳವೆಬಾವಿ ಹಾಕುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಮೂರು ತಿಂಗಳ ಕಾಲ ಬೇಸಿಗೆ ಮುಗಿಯವರಿಗೆ ಗ್ರಾಮೀಣ ಪ್ರದೇಶದಲ್ಲಿ ಸಮಪರ್ಕವಾಗಿ ನೀರು ಪೂರೈಸುವ ಕೆಲಸ ಅಧಿಕಾರಿಗಳ ಹೊಣೆಯಾಗಿದೆ. ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವಂತೆ ತಾಪಂ ಅಧಿಕಾರಿಗೆ ಸೂಚನೆ ನೀಡಲಾಗಿದೆ. ಈ
ಬಾರಿ ಉತ್ತಮ ಮಳೆಯಾಗಿದೆ. ಜೋಳ ಇಳಿವರಿ ರೈತರಲ್ಲಿ ಹರ್ಷ ತಂದಿದೆ. ಹೀಗಾಗಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದಿಲ್ಲ. ತಾಲೂಕಿನಾದ್ಯಂತ ಜಾನುವಾರುಗಳ ಸಂರಕ್ಷಣೆಗೆ ಮೇವಿನ ಅಗತ್ಯ ಕುರಿತಾಗಿ ಪಶು ವೈದ್ಯರಿಂದ ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದರು.

ಅಗತ್ಯ ಬಿದ್ದಲ್ಲಿ ಮೇವು ಬ್ಯಾಂಕ್‌ ಕೇಂದ್ರ ತೆಗೆಯಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ
ಕಳುಹಿಸಲಾಗುತ್ತದೆ. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಪ್ರತಿಯೊಬ್ಬ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು. ತಾಪಂ ಪ್ರಭಾರಿ ಅಧಿಕಾರಿ ವೆಂಕಟೇಶ ಗಲಗ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next