Advertisement

ಮಗನನ್ನು ಪರೀಕ್ಷೆಗೆ ಕರೆದೊಯ್ಯುವ ವೇಳೆ ಅಪಘಾತ: ತಂದೆ ಸಾವು

03:02 PM Jun 25, 2020 | keerthan |

ರಾಯಚೂರು: ಮಗನನ್ನು ಪರೀಕ್ಷೆಗೆ ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿದ್ದು,ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮೀಯ್ಯಾಪುರ ಗ್ರಾಮದ ಬಳಿನಡೆದಿದೆ.

Advertisement

ನಾಗಾರೆಡ್ಡಿ ಮೀಯ್ಯಾಪುರ (52) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ.

ಮೀಯ್ಯಾಪುರ ಗ್ರಾಮದಿಂದ ಗಬ್ಬೂರಿಗೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಮಗನನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಸು ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆಗೆ ತೀವ್ರವಾಗಿ ಪೆಟ್ಟು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಬ್ಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ‌ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next