ದೇವದುರ್ಗ: ಅಂತ್ಯಸಂಸ್ಕಾರಕ್ಕೆ ಸಹಾಯಧನ, ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆಯಡಿ 2017ರಿಂದ ಅರ್ಜಿ ಸಲ್ಲಿಸಿದ 475 ಫಲಾನುಭವಿಗಳಿಗೆ ಈವರೆಗೆ ಬಿಡಿಗಾಸು ಜಮೆ ಆಗದೇ ಇರುವುದರಿಂದ ಅರ್ಜಿದಾರರು ನಿತ್ಯ ತಹಶೀಲ್ದಾರ್ ಕಚೇರಿಗೆ ಅಲೆದಾಡುತ್ತಿದ್ದಾರೆ.
Advertisement
ಸರ್ಕಾರ ಅಂತ್ಯಸಂಸ್ಕಾರಕ್ಕೆ 5 ಸಾವಿರ ರೂ. ಮತ್ತು ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆಯಡಿ ದುಡಿಯುವ ಮನೆ ಮುಖ್ಯಸ್ಥನನ್ನು ಕಳೆದುಕೊಂಡ ಬಿಪಿಎಲ್ ಕುಟುಂಬದ ನೆರವಿಗೆ 20 ಸಾವಿರ ರೂ. ಸಹಾಯಧನ ನೀಡುತ್ತದೆ. ಈ ಯೋಜನೆಗಳಡಿ 2017ರಿಂದ 475 ಜನ ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ ಇವರ ಖಾತೆಗೆ ಬಿಡಿಗಾಸು ಜಮೆ ಆಗಿಲ್ಲ. ಕೇಳಿದರೆ ಪದೇಪದೇ ಚುನಾವಣೆ ನೀತಿ ಸಂಹಿತೆಯ ನೆಪ ಹೇಳಲಾಗುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ.
Related Articles
Advertisement
ಆಗ್ರಹ: ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆ, ಅಂತ್ಯ ಸಂಸ್ಕಾರಕ್ಕೆ ನೆರವು ಯೋಜನೆಯಡಿ ಅರ್ಜಿ ಸಲ್ಲಿಸಿದ 475 ಜನ ಫಲಾನುಭವಿಗಳಿಗೆ ಹಣ ಮಂಜೂರು ಮಾಡುವಂತೆ ಎರಡು ಬಾರಿ ಜಿಲ್ಲಾ ಸಹಾಯಕ ಆಯುಕ್ತರಿಗೆ ಮನವಿ ಮಾಡಲಾಗಿದೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದಿದೆ. ಕೂಡಲೇ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದು ಪುರಸಭೆ ಸದಸ್ಯ ಚಂದ್ರಶೇಖರ ಚಲುವಾದಿ ಆಗ್ರಹಿಸಿದ್ದಾರೆ.
ಕಳೆದ ವರ್ಷಗಳಿಂದ ನಿತ್ಯ ತಹಶೀಲ್ದಾರ್ ಕಚೇರಿಗೆ ಅಲೆದು ಬೇಸತ್ತು ಹೋಗಿದ್ದೇವೆ. ಇಲ್ಲಿವರೆಗೆ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿಲ್ಲ. ಅಧಿಕಾರಿಗಳು ಚುನಾವಣೆ ನೀತಿ ಸಂಹಿತೆ ನೆಪ ಹೇಳುತ್ತಲೇ ಇದ್ದಾರೆ.••ಶ್ರೀದೇವಿ, ಅರ್ಜಿದಾರರು ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆ ಮತ್ತು ಅಂತ್ಯ ಸಂಸ್ಕಾರಕ್ಕೆ ಸಹಾಯಧನ ಯೋಜನೆಯಡಿ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಈಗಾಗಲೇ ಜಿಲ್ಲಾಡಳಿತಕ್ಕೆ ಕಳಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಹಣ ಬಿಡುಗಡೆ ಮಾಡಿಲ್ಲ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ವ್ಯವಸ್ಥೆ ಮಾಡಲಾಗುತ್ತದೆ.
••ಮಲ್ಲಿಕಾರ್ಜುನ ಅರಕೇರಿ,
ತಹಶೀಲ್ದಾರ್