Advertisement

ದೇವದುರ್ಗದಲ್ಲಿ ಬಿಡಾಡಿ ದನಗಳ ಹಾವಳಿ

11:33 AM Feb 20, 2020 | Naveen |

ದೇವದುರ್ಗ: ಪಟ್ಟಣದ ಪ್ರಮುಖ ರಸ್ತೆ, ವಾರ್ಡ್ಗಳಲ್ಲಿ ಬಿಡಾಡಿ ಜಾನುವಾರುಗಳ ಕಿರಿಕಿರಿ ಹೆಚ್ಚಾಗಿದೆ. ಹಾಗಾಗಿ ಸುಗಮ ಸಂಚಾರಕ್ಕೆ ಪೆಟ್ಟು ಬಿದಂತಾಗಿದೆ. ಅಗತ್ಯ ಕ್ರಮವಹಿಸಲು ಪೊಲೀಸ್‌ ಸಿಬ್ಬಂದಿ ಕೊರತೆ ಎದುರಾಗಿದೆ.

Advertisement

ವಾರ್ಡ್‌ನ ಕೆಲ ಸದಸ್ಯರು ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಇಲ್ಲಿವರೆಗೆ ಬಿಡಾಡಿ ಜಾನುವಾರುಗಳ ನಿಯಂತ್ರಣ ಮಾಡಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಒಂದುಕ್ಕೊಂದು ಗುದ್ದಾಡುವುದರಿಂದ ಪಾದಚಾರಿಗಳು ಭಯ ಭೀತರಾಗಿದ್ದಾರೆ.

ಪಟ್ಟಣದ ರಾಜ್ಯ ಹೆದ್ದಾರಿ, ಪ್ರಮುಖ ರಸ್ತೆಯಲ್ಲಿ ದಿನದ 24 ಗಂಟೆ ಬಿಡಾಡಿ ಜಾನುವಾರಗಳದ್ದೇ ಕಾರುಬಾರು. ರಸ್ತೆ ಮಧ್ಯೆ ಎಲ್ಲೆಂದರಲ್ಲಿ ಮಲಗಿರುತ್ತವೆ. ಇಲ್ಲಿನ ಸಮಸ್ಯೆ ಕುರಿತು ಸಾರ್ವಜನಿಕರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೂ ಪ್ರಯೋಜವಾಗಿಲ್ಲ. ಬಿಡಾಡಿ ಜಾನುವಾರುಗಳಿಗೆ ರಸ್ತೆಗಿಳಿಸದಂತೆ ಮಾಲೀಕರಿಗೆ ಸೂಕ್ತ ಎಚ್ಚರಿಕೆ ನೀಡುವಲ್ಲಿ ಪುರಸಭೆ ನಿರ್ಲಕ್ಷ್ಯ ತೋರಿಸಿರುವುದು ಎದ್ದು ಕಾಣುತ್ತಿದೆ.

ಪಟ್ಟಣದ ರಾಜ್ಯ ಹೆದ್ದಾರಿ, ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತ, ಬಸ್‌ ನಿಲ್ದಾಣ, ಜಹಿರುದ್ಧೀನ್‌
ವೃತ್ತ, ಮಿನಿ ವಿಧಾನಸೌಧ, ಜಾಲಹಳ್ಳಿ ಕ್ರಾಸ್‌ ಸೇರಿ ಪ್ರಮುಖ ರಸ್ತೆಯಲ್ಲಿ ಎಲ್ಲೆಂದರಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗುತ್ತಿದೆ. ಬೈಕ್‌ ಸವಾರರು ಎಲ್ಲೆಂದರಲ್ಲಿ ಬೈಕ್‌ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ಪೆಟ್ಟು ಬಿದಿದೆ. ಪೊಲೀಸ್‌ ಸಿಬ್ಬಂದಿ ಕೊರತೆಯಿಂದಾಗಿ ಟ್ರಾಫಿಕ್‌
ಸಮಸ್ಯೆ ನಿಯಂತ್ರಣ ಬರುತ್ತಿಲ್ಲ. ಎಲ್ಲೆಂದರಲ್ಲಿ ಆಟೋ, ಟಂಟಂಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರ ಸಂಪೂರ್ಣ ಹದಗೆಟ್ಟಿದೆ. ವಾಹನಕ್ಕೆ ಸಂಬಂಧಿಸಿದಂತೆ ದಾಖಲೆ ತಪಾಸಣೆಯಾಗದ ಹಿನ್ನೆಲೆಯಲ್ಲಿ ಚಾಲಕರಿಗೆ ಎಚ್ಚರ ಇಲ್ಲದಂತಾಗಿದೆ.

ಪಟ್ಟಣದಲ್ಲಿ ಬಹುತೇಕ ಟ್ರಾಫಿಕ್‌ ಸಮಸ್ಯೆ ಇಲ್ಲದಾಗ ಸಿಂಧನೂರಿಗೆ ಮಂಜೂರಾಗಿದ್ದ ಸಂಚಾರ ಪೊಲೀಸ್‌ ಠಾಣೆಯನ್ನು ಶಾಸಕ ಕೆ. ಶಿವನಗೌಡ ನಾಯಕ ಈ ಹಿಂದೆ ಸಚಿವರಿದಾಗಿದ್ದಾಗ ತಾಲೂಕಿಗೆ ಮಂಜೂರಿ ಮಾಡಿಸಿದ್ದರು. ಇದೀಗ ದಿನೇ ದಿನೇ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ರಾಜ್ಯ ಹೆದ್ದಾರಿಯಲ್ಲಿ ಸಿಗ್ನಲ್‌, ಸಿಸಿ ಕ್ಯಾಮೆರಾ ಅಳವಡಿಸುವುದು ಬಹಳ ಅಗತ್ಯವಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಲ್ಲಿನ ಸಮಸ್ಯೆ ಕುರಿತು ಅಗತ್ಯ ಕ್ರಮವಹಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

ಟ್ರಾಫಿಕ್‌ ಸಮಸ್ಯೆ ನಿಯಂತ್ರಣ ಮಾಡಲು ರಾಜ್ಯ ಹೆದ್ದಾರಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗುವುದು. ಸಿಗ್ನಲ್‌ ಅಳವಡಿಸುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಸಲು ಪುರಸಭೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.
ಎಲ್‌.ಬಿ. ಅಗ್ನಿ,
ಪಿಎಸ್‌ಐ ದೇವದುರ್ಗ

ಬಿಡಾಡಿ ದನಗಳ ಹಾವಳಿ ತಡೆಗಟ್ಟಲು ಈಗಾಗಲೇ ಸಿಬ್ಬಂದಿ ಸೂಚಿಸಲಾಗಿದೆ. ಬಹುತೇಕರು ಗಮನಕ್ಕೆ ತಂದಿದ್ದಾರೆ. ಸಮಸ್ಯೆ ಕುರಿತು ಹಂತ ಹಂತವಾಗಿ ಬಗೆಹರಿಸಲಾಗುವುದು.
ತಿಮ್ಮಪ್ಪ ಜಗ್ಲಿ,
ಪುರಸಭೆ ಮುಖ್ಯಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next