Advertisement

ಅಕ್ರಮ ಮದ್ಯ ಮಾರಾಟ ತಡೆಗೆ ಬಾಗೂರು ಗ್ರಾಮದ ಸ್ತ್ರೀ ಯರ ಆಗ್ರಹ

05:40 PM Jun 08, 2020 | Naveen |

ದೇವದುರ್ಗ: ತಾಲೂಕಿನ ಬಾಗೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಗ್ರಾಮದ ಮಹಿಳೆಯರು ಜಾಲಹಳ್ಳಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

Advertisement

ಬಾಗೂರು ಗ್ರಾಮದಲ್ಲಿ ಕಳೆದ ಆರು ತಿಂಗಳಿನಿಂದ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ. ದಿನೇದಿನೆ ಕುಡುಕರ ಹಾವಳಿ ಹೆಚ್ಚಾಗಿದೆ. ಇದರಿಂದ ಕುಟುಂಬಗಳು ಬೀದಿಗೆ ಬೀಳುತ್ತಿದ್ದು, ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಮದ್ಯವ್ಯಸನಿಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಅಲ್ಲದೇ ಕುಟುಂಬದ ಸದಸ್ಯರಿಗೆ ಹೊಡೆಯುವುದು, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮದ್ಯ ಮಾರಾಟಕ್ಕೆ ಕೆಲ ಜನಪ್ರತಿನಿಧಿಗಳ ಕುಮ್ಮಕು ಇದೆ. ಈ ಬಗ್ಗೆ ದೂರು ನೀಡಿದರೂ ಮದ್ಯ ಮಾರಾಟ ತಡೆಗೆ ಮುಂದಾಗಿಲ್ಲ. ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next