Advertisement
ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. ಆದರೀಗ ರಾಜ್ಯದಲ್ಲಿ 10ನೇ ಸ್ಥಾನಕ್ಕೆ ಪಡೆಯುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಷಯವಾರು ನುರಿತ ಶಿಕ್ಷಕರಿಂದ ವಿಶೇಷ ಬೋಧನೆ ಆರಂಭಿಸಲಾಗಿದೆ. ವಾರದಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಬೋಧನಾ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಗಲಿರಳು ಶ್ರಮಿಸುತ್ತಿದ್ದಾರೆ.
ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಷಯವಾರು ನುರಿತ ಶಿಕ್ಷಕರಿಂದ ಇಂಗ್ಲಿಷ್, ವಿಜ್ಞಾನ, ಸಮಾಜ ವಿಜ್ಞಾನ ವಿಶೇಷ ಭೋಧನೆ ನಡೆಸಲಾಗುತ್ತಿದೆ. 31 ಪ್ರೌಢಶಾಲೆ 3240 ವಿದ್ಯಾರ್ಥಿಗಳು: ಪಟ್ಟಣ ಸೇರಿ ತಾಲೂಕಿನಾದ್ಯಂತ 31 ಸರಕಾರಿ ಪ್ರೌಢಶಾಲೆಗಳ 3240 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ತರಗತಿ ಪ್ರವೇಶ ಪಡೆದಿದ್ದಾರೆ. ಆದರೀಗ ಫಲಿತಾಂಶ ಸುಧಾರಣೆಗಾಗಿ ವಿಶೇಷ ತರಗತಿಗಳು ನಡೆಸುವ ಮೂಲಕ ಫಲಿತಾಂಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.
Related Articles
Advertisement
ವಾರದಲ್ಲಿ ನಾಲ್ಕು ದಿನ: ಸರಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿವಿದ್ಯಾರ್ಥಿಗಳಿಗೆ ವಾರದಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಕೋಚಿಂಗ್, ತರಗತಿ ಹಾಗೂ ಘಟಕ ಪರೀಕ್ಷೆಗಳು ನಡೆಯುತ್ತಿವೆ. ನವೆಂಬರ್ 25ರಿಂದ ಆರಂಭವಾಗಿದ್ದು, ಫೆಬ್ರವರಿ 15ರ ವರೆಗೆ ಅಧ್ಯಾಯ ಪರೀಕ್ಷೆಗಳು ಮತ್ತು ಶಿಕ್ಷಕರಿಂದ ಕಲಿಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದೆ. ತಂಡಗಳು ಶಿಕ್ಷಕರು ಬೋಧಿಸುವ ಕಾರ್ಯ ಪರಿಶೀಲಿವೆ ಎಂದು ಹೇಳಲಾಗುತ್ತಿದೆ. ಜಿಪಂ ಸಿಇಒ ಆಸಕ್ತಿ: ರಾಜ್ಯಕ್ಕೆ ಉತ್ತಮ ಫಲಿತಾಂಶ ನೀಡುವ ಉದ್ದೇಶದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಜಿ. ಲಕ್ಷ್ಮೀಕಾಂತರೆಡ್ಡಿ ತೀರಾ ಆಸಕ್ತಿ ವಹಿಸಿದ್ದಾರೆ. ಅದರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹೆಚ್ಚಿನ ಗಮನಹರಿಸಿದ್ದಾರೆ. ಜಿಪಿಎಸ್ ಕಡ್ಡಾಯ: ಪಟ್ಟಣ ಸೇರಿ ತಾಲೂಕಿನಾದ್ಯಂತ 31 ಸರಕಾರಿ
ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆರಂಭಿಸಲಾದ ಕೋಚಿಂಗ್, ವಿಶೇಷ ಬೋಧನೆ ತರಗತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ, ಅಕ್ಷರ ದಾಸೋಹ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಶಾಲೆ ಭೇಟಿ ನೀಡಿ ಪರಿಶೀಲಿಸಿದ ಛಾಯಾಚಿತ್ರವನ್ನು ಜಿಪಿಎಸ್ ಮೂಲಕ ಮೇಲಧಿಕಾರಿಗಳಿಗೆ ರವಾನೆ ಮಾಡುವುದು ಕಡ್ಡಾಯವಾಗಿದೆ. ಹೀಗಾಗಿ ಅಧಿಕಾರಿಗಳು ತೀರಾ ನಿಗಾವಹಿಸಿದ್ದು, ಈ ಬಾರಿ ಎಸ್
ಎಸ್‌ಎಲ್‌ಸಿ ಫಲಿತಾಂಶ ಗುರಿ ಮುಟ್ಟುವ ನಿರೀಕ್ಷೆಯಲ್ಲಿದೆ ಎಂಬ
ಆಶಾಭಾವನೆ ಇದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10ನೇ ಸ್ಥಾನಕ್ಕೆ ಬರುವ ನಿಟ್ಟಿನಲ್ಲಿ ನವಂಬರ್ 25ರಂದು ವಿಶೇಷ ಬೋಧನೆ ಘಟಕ ಪರೀಕ್ಷೆ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಕಟ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ಪಡೆಯಲಾಗಿದೆ. 31 ಪ್ರೌಢಶಾಲೆಯಲ್ಲಿ 3240 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
.ಡಾ| ಎಸ್.ಎಂ. ಹತ್ತಿ,
ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ತೇಲ್ಕರ್