Advertisement

ಸ್ತ್ರೀಯರು ಸ್ವಾವಲಂಬಿ ಆಗಲಿ

04:37 PM Dec 22, 2019 | Naveen |

ದೇವದುರ್ಗ: ಗ್ರಾಮೀಣ ಮಹಿಳೆಯರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ಗುಳೆ ಹೋಗುವ ಬದಲು ಗ್ರಾಮದಲ್ಲೇ ಹೈನುಗಾರಿಕೆಯಲ್ಲಿ ತೊಡಗಿ ಸ್ವಾವಲಂಬಿಜೀವನ ಸಾಗಿಸಬೇಕು. ಇದಕ್ಕಾಗಿರುವ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಹೇಳಿದರು.

Advertisement

ಸಮೀಪದ ಲಿಂಗದಹಳ್ಳಿ ಗ್ರಾಮದಲ್ಲಿ ಕೆಎಂಎಫ್‌, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪಶು ಸಂಗೋಪನಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸರಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಹಾಲು ಉತ್ಪಾದಕರ ಸಂಘಗಳ ರಚನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕು ನೀರಾವರಿ ಸೌಲಭ್ಯ ಹೊಂದಿದೆ. ಈ ಭಾಗದ ರೈತರು ನಗರ ಪ್ರದೇಶಗಳಿಗೆ ಗುಳೆ ಹೋಗದಂತೆ ಹಾಲು ಉತ್ಪಾದನೆ ಕಡೆ ಹೆಚ್ಚಿನ ಗಮನ ಹರಿಸದಾಗ ಜೀವನದಲ್ಲಿ ಬದಲಾವಣೆ ಕಾಣಬಹುದು. ಸರಕಾರ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಪ್ರಯೋಜನ ಪಡೆಯಬೇಕು ಎಂದರು.

ಲಿಂಗದಹಳ್ಳಿ, ಚಿಂಚೋಡಿ, ಬುಂಕಲದೊಡ್ಡಿ ಸೇರಿದಂತೆ ಇತರೆ ಗ್ರಾಮಗಳ ರೈತರು ಹೈನುಗಾರಿಕೆಯಲ್ಲಿ ತೊಡಗಬೇಕು. ಬೇರೆ ರಾಷ್ಟ್ರಗಳಿಂದ ದೇಶವು ಹಾಲು ಆಮದು ಮಾಡಿಕೊಳ್ಳುವ ಬದಲು ನಮ್ಮ ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದಿಸಿ ಇತರೆ ರಾಷ್ಟ್ರಗಳಿಗೆ ಪೂರೈಸುವ ಕೆಲಸ ಆಗಬೇಕು ಎಂದರು.

ಗ್ರಾಮೀಣ ಮಹಿಳೆಯರು ಸ್ವಾವಲಂಬನೆ ಸಾಧಿಸಿದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಅನುಕೂಲವಾಗಲಿದೆ. ಲಿಂಗದಹಳ್ಳಿ ಗ್ರಾಮದಲ್ಲಿ ಆರಂಭಿಸಲಾಗುತ್ತಿರುವ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಈ ಭಾಗದಲ್ಲಿ ಹೈನುಗಾರಿಕೆಯಲ್ಲಿ ತೊಡಗಿದ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದರು.

Advertisement

ಜಿಲ್ಲಾಧಿಕಾರಿ ವೆಂಕಟೇಶಕುಮಾರ, ಜಿಪಂ. ಸಿಇಒ ಜಿ.ಲಕ್ಷ್ಮೀಕಾಂತ ರೆಡ್ಡಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ಪಶು ವೈದ್ಯರಾದ ಬಸವರಾಜ, ತಾಪಂ ಇಒ ಹಾಲಸಿದ್ದಪ್ಪ ಪೂಜೇರಿ, ಜಿಪಂ ಎಇಇ ವೆಂಕಟೇಶ ಗಲಗ, ಪಿಡಬ್ಲ್ಯೂಡಿ ಎಇಇ ಬಿ.ಬಿ.ಪಾಟೀಲ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next