Advertisement

ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಪ್ರಮುಖ

03:55 PM May 03, 2019 | Naveen |

ದೇವದುರ್ಗ: ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಕಾರ್ಮಿಕರಿಂದಲೇ ದೇಶ ನಿರ್ಮಾಣ. ಅವರಿಲ್ಲದೇ ಬದುಕು ಸಾಧ್ಯವಿಲ್ಲ ಎಂದು ದೇವದುರ್ಗ ಜೆಎಂಎಫ್‌ಸಿ ಹಾಗೂ ಸಿವಿಲ್ ನ್ಯಾಯಾಧಿಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ರಾಜಶೇಖರ ಹೇಳಿದರು.

Advertisement

ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಅಭಿಯೋಜನೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಮಿಕರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಕಾನೂನು ಸೇವಾ ಸಮಿತಿ ವತಿಯಿಂದ ಕಾರ್ಮಿಕರಿಗೆ ಉಚಿತ ಕಾನೂನು ಅರಿವು-ನೆರವು ನೀಡಲಾಗುವುದು. ಕಾರ್ಮಿಕರ ಕಾನೂನು ತೊಡಕುಗಳಿದ್ದಲ್ಲಿ ಕಾನೂನು ಸೇವಾ ಸಮಿತಿ ಸಂಪರ್ಕಿಸಬಹುದಾಗಿದೆ. ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರು ಅವರಿಗೆ ಸೂಕ್ತ ಸೌಲಭ್ಯ ಒದಗಿಸಬೇಕು. ಕಾರ್ಮಿಕರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದರು.

ಕಾರ್ಮಿಕ ನೀರೀಕ್ಷಕ ಜನಾರ್ದನಕುಮಾರ ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಮತ್ತು ಪಡೆಯುವ ವಿಧಾನ ಕುರಿತು ಉಪನ್ಯಾಸ ನೀಡಿ, ಕಟ್ಟಡ, ವಾಹನ ಚಾಲಕ, ಪೌರ ಕಾರ್ಮಿಕ, ಟೇಲರಿಂಗ್‌ ಮತ್ತು ವಿವಿಧ ಕೆಲಸಗಳಲ್ಲಿ ತೊಡಗಿದವರನ್ನು ಕಾರ್ಮಿಕರೆಂದು ಪರಿಗಣಿಸಲಾಗುತ್ತದೆ. ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಉಚಿತ ಗುರುತಿನ ಚೀಟಿ, ಆಸ್ಪತ್ರೆ ಸೌಲಭ್ಯ, ವಿಮೆ ಸೇರಿದಂತೆ ಹಲವು ಸೌಲಭ್ಯಗಳಿವೆ. ಇವುಗಳ ಸದುಪಯೋಗಕ್ಕಾಗಿ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ ಪಡೆದುಕೊಳ್ಳುವಂತೆ ಕಾರ್ಮಿಕರಿಗೆ ಸಲಹೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಎಸ್‌.ಬಿ.ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ಆದೆಪ್ಪ, ಹಮಾಲರ ಸಂಘ ಮತ್ತು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಯೂಸೂಫ್‌, ವಕೀಲರ ಸಂಘದ ಉಪಾಧ್ಯಕ್ಷ ಹನುಮಂತ ಭಂಡಾರಿ, ನ್ಯಾಯವಾದಿ ರವಿಕುಮಾರ ಪಾಟೀಲ ಅಳ್ಳುಂಡಿ, ಸಿಬ್ಬಂದಿ ಯಲ್ಲಪ್ಪ ಮಲದಕಲ್ ಉಪಸ್ಥಿತರಿದ್ದರು. ಪುರಸಭೆ, ಟೇಲರಿಂಗ್‌, ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next