Advertisement

ದೇವನಹಳ್ಳಿ ವಿಮಾನ ನಿಲ್ದಾಣ: 46 ಲಕ್ಷ ಮೌಲ್ಯದ ಚಿನ್ನದ ಸರ ವಶ

10:09 PM Oct 19, 2022 | Team Udayavani |

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಚಿನ್ನದ ಸರಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ.

Advertisement

ಗುಪ್ತಚರ ದಳದ ಸಿಬಂದಿ ಖಚಿತ ಮಾಹಿತಿಯ ಮೇರೆಗೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಯನ್ನು ತೀವ್ರವಾಗಿ ತಪಾಸಣೆ ಮಾಡಿದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತನ ಬಳಿ 898 ಗ್ರಾಂ ಚಿನ್ನವಿರುವುದು ತಿಳಿದು ಬಂದಿದೆ.

ವಶಕ್ಕೆ ಪಡೆದ ಚಿನ್ನದ ಸರದ ಒಟ್ಟು ಮೌಲ್ಯವೂ 46.74 ಲಕ್ಷ ಎಂದು ಅಂದಾಜಿಸಲಾಗಿದೆ, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಪ್ರಗತಿಯಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next