Advertisement

Devanahalli: ಅಕ್ರಮವಾಗಿ ಸಾಗಿಸುತ್ತಿದ್ದ1 ಕೋಟಿ 29 ಲಕ್ಷ ರೂ.ಮೌಲ್ಯದ ಚಿನ್ನ ವಶ

09:31 PM Jan 05, 2024 | Team Udayavani |

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ 29 ಲಕ್ಷ ರೂಪಾಯಿ ಮೌಲ್ಯದ 2086 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಓರ್ವ ಪುರುಷ ಸೇರಿ 12 ಜನ ಮಹಿಳೆಯರನ್ನು ಬಂಧಿಸಲಾಗಿದೆ.

Advertisement

ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು,ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿದ್ದು, ಮದೀನಾದಿಂದ ಮಸ್ಕತ್ ಮೂಲಕ ಚಿನ್ನ ಸಾಗಾಣಿಕೆ ಮಾಡಲಾಗುತ್ತಿತ್ತು.ಪ್ರಯಾಣಿಕರ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳ ಮಹತ್ವದ ಕಾರ್ಯಚರಣೆ ಇದಾಗಿದೆ. ವಿದೇಶಗಳಿಂದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next