Advertisement

ದೇವನಹಳ್ಳಿ ಪುರಸಭೆ: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ

12:42 PM Nov 07, 2020 | Suhan S |

ದೇವನಹಳ್ಳಿ: ಇಲ್ಲಿನ ಪುರಸಭೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ 6ನೇ ವಾರ್ಡಿನ ಕಾಂಗ್ರೆಸ್‌ನ ರೇಖಾ ವೇಣು ಗೋಪಾಲ್‌ ಹಾಗೂ ಉಪಾಧ್ಯಕ್ಷರಾಗಿ 7ನೇ ವಾರ್ಡಿನ ಪುರಸಭಾ ಸದಸ್ಯೆ ಜೆಡಿಎಸ್‌ನ ಪುಷ್ಪಲತಾ ಲಕ್ಷ್ಮೀನಾರಾಯಣ್‌ ಅವಿರೋಧ ಆಯ್ಕೆಗೊಂಡಿದ್ದಾರೆ.

Advertisement

ದೇವನಹಳ್ಳಿ ಪುರಸಭೆಯಲ್ಲಿ23 ಸದಸ್ಯ ಬಲವಿದ್ದು, ಅದರಲ್ಲಿ ಕಾಂಗ್ರೆಸ್‌ 10, ಜೆಡಿಎಸ್‌ 6, ಬಿಜೆಪಿ 2, ಬಿಎಸ್‌ಪಿ 1, ಪಕ್ಷೇತರ 3 ಸ್ಥಾನಗಳಿದ್ದು, 14ನೇ ವಾರ್ಡಿನ ಜೆಡಿಎಸ್‌ನ ಪುರಸಭಾ ಸದಸ್ಯವೈ.ಸಿ.ಸತೀಶ್‌ ಕುಮಾರ್‌ ನಿಧನವಾಗಿರುವುದರಿಂದ ಒಂದು ಸ್ಥಾನ ತೆರವಾಗಿದ್ದು, ಒಟ್ಟು 23 ಸ್ಥಾನಗಳಲ್ಲಿ 22 ಪುರಸಭಾ ಸದಸ್ಯರು ಸಭೆಗೆ ಹಾಜರಾಗಿದ್ದರು.

ಕಳೆದ ಮೇ, 2019ರಲ್ಲಿ ಚುನಾವಣೆ ನಡೆದು ಸದಸ್ಯರಾಗಿ ಆಯ್ಕೆಗೊಂಡವರು 16 ತಿಂಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ರೇಖಾ ವೇಣುಗೋಪಾಲ್‌, ಉಪಾಧ್ಯಕ್ಷ ಸ್ಥಾನಕ್ಕೆ ಪುಷ್ಪಲತಾ ಲಕ್ಷ್ಮೀ ನಾರಾಯಣ್‌ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಅಜಿತ್‌ಕುಮಾರ್‌ ರೈಅವಿರೋಧ ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದರು.  ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು.

ಅಭಿವೃದ್ಧಿಗೆ ಒತ್ತು: ನೂತನ ಅಧ್ಯಕ್ಷೆ ರೇಖಾ ವೇಣುಗೋಪಾಲ್‌ ಮಾತನಾಡಿ, ನಗರದ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಲಾಗುವುದು. ಚರಂಡಿ ಸಮಸ್ಯೆ ಇದ್ದು, ಕೂಡಲೇ ಪರಿಹಾರಕಲ್ಪಿಸಲಾಗುವುದು. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ, ಈ ಹಿಂದೆ ಕುಡಿಯುವ ನೀರಿನ ಸಮಸ್ಯೆ ಇತ್ತು. ಸ್ವಲ್ಪಚೇತರಿಸಿಕೊಂಡಿದೆ. ಕುಡಿಯುವ ನೀರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಕಸ ವಿಲೇವಾರಿ ಹಾಗೂ ಸ್ವಚ್ಛತೆ ಕಡೆ ಹೆಚ್ಚು ಗಮನ ಹರಿಸಲಾಗುವುದು.ದೇವನಹಳ್ಳಿ ಪುರಸಭೆ 23 ಸದಸ್ಯರಿದ್ದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಎಲ್ಲಾ ವಾರ್ಡ್‌ಗಳಿಗೂ ಸಮಾನವಾಗಿ ಹಂಚಿ ಪಟ್ಟಣದ ಅಭಿವೃದ್ಧಿಗೆ ಸದಸ್ಯರೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ,ಹಾಗೂ ಚುನಾವಣೆ ಬಂದಾಗ ಮಾತ್ರ ಪಕ್ಷ ಉಳಿದಂತೆ ಪಟ್ಟಣದ ಏಳ್ಗೆಗೆ ಎಲ್ಲಾ ಸದಸ್ಯರು ಕೈಜೋಡಿಸಿ ಅಭಿವೃದ್ಧಿ ಕಡೆಗೆ ಹೋಗೋಣ. ಒಟ್ಟಾರೆ ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ನೂತನ ಉಪಾಧ್ಯಕ್ಷೆ ಪುಷ್ಪಲತಾ ಲಕ್ಷ್ಮೀ ನಾರಾಯಣ್‌ ಮಾತನಾಡಿ, ನಗರದಲ್ಲಿ ಒಳಚರಂಡಿ ವ್ಯವಸ್ಥೆ ಆಗಬೇಕು. ರಸ್ತೆಗಳು ಅಭಿವೃದ್ಧಿಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಹೆಚ್ಚಿನ ಗಮನಹರಿಸಬೇಕು.ಬೀದಿದೀಪ ಸೇರಿಮೂಲಭೂತ

Advertisement

ಸೌಕರ್ಯ ಕಡೆ ಹೆಚ್ಚಿನ ಒತ್ತು ನೀಡಿ ಅಧ್ಯಕ್ಷರ ಮತ್ತು ಸದಸ್ಯರ ಸಹಕಾರದಲ್ಲಿ ಸರ್ವತೋಮುಖಅಭಿವೃದ್ಧಿಗೆ ಶ್ರಮಿಸುತ್ತೇನೆಂದರು.

ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ರಾಜ್ಯ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್‌, ಕಾರ್ಯದರ್ಶಿ ಎಸ್‌.ಆರ್‌.ರವಿಕುಮಾರ್‌, ಮಾಜಿ ಶಾಸಕ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ಜಿಪಂ ಸದಸ್ಯರಾದ ಲಕ್ಷ್ಮೀ ನಾರಾಯಣ್‌, ಕೆ.ಸಿ.ಮಂಜುನಾಥ್‌, ಅನಂತಕುಮಾರಿ ಚಿನ್ನಪ್ಪ, ಜೆಡಿಎಸ್‌ ಕಾರ್ಯಾಧ್ಯಕ್ಷ ಆರ್‌.ಮುನೇಗೌಡ, ಜೆಡಿಎಸ್‌ ತಾಲೂಕು ಪ್ರಧಾನ ಕಾರ್ಯದರ್ಶಿ ರವೀಂದ್ರ, ಟೌನ್‌

ಅಧ್ಯಕ್ಷ ಮುನಿಆಂಜಿನಪ್ಪ, ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌, ಉಪಾಧ್ಯಕ್ಷ ಶಾಂತಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌ .ಪಿ.ಮುನಿರಾಜು, ಮುಖ್ಯಾಧಿಕಾರಿ ಎ.ಎಚ್‌.ನಾಗ ರಾಜ್‌, ಪುರಸಭಾ ಮಾಜಿ ಸದಸ್ಯರಾದ ವೇಣು ಗೋಪಾಲ್‌(ಗೋಪಿ), ಸೊಸೈಟಿ ಕುಮಾರ್‌, ಮಾಜಿ ಪುರಸಭಾಧ್ಯಕ್ಷ ಎಂ.ಮೂರ್ತಿ, ಪುರಸಭಾ ಸಿಬ್ಬಂದಿ, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿಯಾವುದೇ ಪಕ್ಷಕ್ಕೆ ಬಹುಮತ ಬಾರದೇ ಇರುವುದರಿಂದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಆಡಳಿತ ಮಾಡಲು ತೀರ್ಮಾನಿಸಿದ್ದೇವೆ. ನಗರದ ಸರ್ವತೋಮುಖಅಭಿವೃದ್ಧಿಗಾಗಿ ಪಕ್ಷಾ ತೀತವಾಗಿ ಶ್ರಮಿಸಲಿದ್ದು ನಗರದ ಜನ ಇಟ್ಟಿರುವ ನಂಬಿಕೆ ಉಳಿಸಿಕೊಂಡು ಹೋಗಬೇಕು. ಎಲ್‌.ಎನ್‌.ನಾರಾಯಣಸ್ವಾಮಿ, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next