Advertisement

ಸಂಚಾರ ನಿಯಮ ಪಾಲಿಸುವಂತೆ ಸಂಬಂಧಿಕರಿಗೆ ಪತ್ರ

05:41 PM Jan 23, 2020 | Naveen |

ದೇವನಹಳ್ಳಿ: ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಅಪಘಾತ ತಡೆಯಲು ಸಾಧ್ಯ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ
ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಚಂದ್ರಶೇಖರ್‌ ತಿಳಿಸಿದರು.

Advertisement

ನಗರದ ಹೊಸ ಕುರುಬರ ಕುಂಟೆ ರಸ್ತೆಯಲ್ಲಿರುವ ಎಸ್‌ಎಲ್‌ಎಸ್‌ ಶಾಲಾ ಆವರಣದಲ್ಲಿ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸ್‌ ಠಾಣೆ, ಎಸ್‌ಎಲ್‌ಎಸ್‌ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ 31 ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಸಾಪ್ತಾಹ ಅಂಗವಾಗಿ ಶಾಲಾ ಮಕ್ಕಳಿಂದ ತಮ್ಮ ಸಂಬಂಧಕರಿಗೆ ಪತ್ರ ಬರೆಯುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಏನಾದರೂ ಬದಲಾವಣೆ ಕಾಣ ಬೇಕಾದರೆ ಯುವಕರಿಂದ ಹಾಗೂ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ. ಪ್ರತಿ ವರ್ಷ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ವಾಹನ ಚಾಲಕರು ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು. ಮೊಬೈಲ್‌ ನಲ್ಲಿ ಮಾತನಾಡುತ್ತ ಚಾಲನೆ ಮಾಡಬಾರದು. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತದೆ. ಚಾಲಕರು ತೋರುವ ಅಜಾಗೃತೆಗೆ ಅಮಾಯಕರು ಬಲಿಯಾಗಬೇಕಾಗುತ್ತದೆ. ಯಾವುದೇ
ಸಂದರ್ಭದಲ್ಲಿ ಅಪಘಾತಗಳು ಸಂಭವಿಸಿದಾಗ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಪಘಾತಗಳ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವ ಸಾರ್ವಜನಿಕರನ್ನು ಹೆಚ್ಚಿನ ವಿಚಾರಣೆ ಮಾಡುವಂತಿಲ್ಲ. ಇದರಿಂದ ಸಾರ್ವಜನಿಕರು ಭಯ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಬಾರದು ಎಂದು ವಿವರಿಸಿದರು.

ಎಸ್‌ಎಲ್‌ ಎಸ್‌ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಡಿ.ಎಸ್‌ ಧನಂಜಯ ಮಾತನಾಡಿ,
ಶಾಲೆಯ ಸುಮಾರು 800 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಾಹನ ಹೊಂದಿರುವ ತಮ್ಮ ನೆಂಟರಿಷ್ಟರಿಗೆ ರಸ್ತೆ ಸಂಚಾರ ನಿಯಮ ಪಾಲಿಸುವಂತೆ ಅಂಚೆ ಕಾರ್ಡ್ನಲ್ಲಿ ಪತ್ರ ಬರೆದು ಅಂಚೆಯ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಉತ್ತಮವಾಗಿದೆ. ಅಜಾಗೃಕತೆ ಚಾಲನೆಯು ಜೀವ ಹಾನಿಗೆ ಕಾರಣವಾಗುತ್ತದೆ. ಚಾಲಕರು ಯಾವುದೇ ರೀತಿ ವಾಹನ ಚಲಾಯಿಸುವಾಗ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪ್ರತಿಯೊಬ್ಬರೂ ಜಾಗರೂಕರಾಗಿ ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಧನಂಜಯ, ಹಾಗೂ ಪೋಲೀಸ್‌ ಸಿಬ್ಬಂದಿ ವರ್ಗದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next