Advertisement

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

12:29 AM May 26, 2022 | Team Udayavani |

ಮೈಸೂರು: ಪಠ್ಯ ಪರಿಷ್ಕರಣೆಯಿಂದ ಆಗಿರುವ ತಪ್ಪುಗಳನ್ನು ಸರಿಪಡಿಸಲು, ಮಕ್ಕಳು ಪ್ರಜಾಸತ್ತಾತ್ಮಕವಾಗಿ ಬೆಳೆಯಲು, ಸಂವಿಧಾನದ ಆಶಯಗಳನ್ನು ತಿಳಿಯಲು ಪರ್ಯಾಯವಾಗಿ ಕಾರ್ಯಕ್ರಮ ರೂಪಿಸುವುದಾಗಿ ಹಿರಿಯ ಸಾಹಿತಿ ದೇವನೂರು ಮಹಾದೇವ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು ಈಗಾಗಲೇ ಬಳಸು ತ್ತಿರುವ ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ ಮೂಲಕ ಪಠ್ಯ ಪರಿಷ್ಕರಣೆಯಲ್ಲಾಗಿರುವ ತಪ್ಪುಗಳನ್ನು ಸರಿಪಡಿಸುತ್ತೇವೆ. ಸಂವಿಧಾನದ ಪ್ರಸ್ತಾವನೆಯನ್ನು ಹಾಡು ಕಟ್ಟಿ ಹಾಡ ಲಿದ್ದೇವೆ. ತಜ್ಞರ ಮೂಲಕ ಉಪನ್ಯಾಸ ಏರ್ಪಡಿಸುತ್ತೇವೆ. ಕಮ್ಮಟ ಮಾಡಿ ಪ್ರಶ್ನಿಸುವ, ವೈಜ್ಞಾನಿಕ ಮನೋಭಾವ ಬೆಳೆಸಲಿದ್ದೇವೆ. ಪುಸ್ತಕದಲ್ಲಿ ತಮ್ಮ ಪಠ್ಯವನ್ನು ಕೈ ಬಿಡುವಂತೆ ತಿಳಿಸಿದ್ದೇನೆ. ಪಠ್ಯ ಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿದ್ದರೆ ಬೋಧಿಸದಂತೆ ಶಿಕ್ಷಕರಿಗೆ ಸೂಚಿಸಬೇಕು ಎಂದರು.

ದೇವನೂರ ಮಹಾದೇವ ಅವರನ್ನು ಕೆಲವರು ದಾರಿ ತಪ್ಪಿಸುತ್ತಿದ್ದಾರೆಂಬ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಹಾಗಾದರೆ ಅವರನ್ನು ಯಾರು ದಾರಿ ತಪ್ಪಿಸಿ¨ªಾರೆ? ಎಂಬುದನ್ನು ಪ್ರಶ್ನೆ ಮಾಡಬೇಕು ಎಂದರು.

ರಾಜ್ಯವ್ಯಾಪಿ ಹೋರಾಟ: ಕರವೇ
ಬೆಂಗಳೂರು: ಪಠ್ಯಮರು ಪರಿಷ್ಕರಣೆ ಸಂಬಂಧಿಸಿದಂತೆ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯನ್ನು ರದ್ದುಗೊಳಿಸಿ, ಎಲ್ಲ ಶಿಫಾರಸುಗಳನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಕರವೇ ರಾಜ್ಯವ್ಯಾಪಿ ಹೋರಾಟ ನಡೆಸಲು ತೀರ್ಮಾನಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ. ನಾಡಿನಲ್ಲಿ ಹಲವು ಹೆಸರಾಂತ ಶಿಕ್ಷಣ ತಜ್ಞರು ಇದ್ದರೂ, ಶಿಕ್ಷಣದ ಬಗ್ಗೆ ತಿಳುವಳಿಕೆ ಇಲ್ಲದವರನ್ನು ನೇಮಕ ಮಾಡಿರುವುದು ಎಷ್ಟ ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಕ್ಕಳ ಪೋಷಕರನ್ನು ಎಚ್ಚರಿಸಬೇಕಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಈ ಸಂಬಂಧ ಪದಾಧಿಕಾರಿಗಳ ಸಭೆ ನಡೆಸಿ ಮುಂದಿನ ಹೋರಾಟ ರೂಪಿಸುವುದಾಗಿ ತಿಳಿಸಿದ್ದಾರೆ.

ಶಾಲಾ ಪಠ್ಯ ಪುಸ್ತಕಗಳಲ್ಲಿ ಮಹನೀಯರ ಅಧ್ಯಯನ ವಿಷಯಗಳ ಸೇರ್ಪಡೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಹಾಗೂ ಸಂಘರ್ಷಕ್ಕೆ ರಾಜ್ಯ ಬಿಜೆಪಿ ಸರಕಾರ ಅವಕಾಶ ಮಾಡಿಕೊಟ್ಟಿದೆ. ಸಮಾಜದಲ್ಲಿನ ಭಾವೈಕ್ಯವನ್ನು ಹಾಳು ಮಾಡುತ್ತಿದೆ.
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

Advertisement

 

Advertisement

Udayavani is now on Telegram. Click here to join our channel and stay updated with the latest news.

Next