Advertisement
ಚಿತ್ರದ ಬಗ್ಗೆ ಮಾತನಾಡುವ ಜನಾರ್ದನ್, “ದೇವರ ಆಟ ಬಲ್ಲವರಾರು 1975 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಎಲ್ಲಾ ಕೆಲಸಗಳನ್ನು ಒಂದು ತಿಂಗಳೊಳಗೆ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಚಿತ್ರವನ್ನು ತೆರೆಗೆ ತರಬೇಕು. ನಮ್ಮ ಚಿತ್ರ ಗಿನ್ನೆಸ್ ರೆಕಾರ್ಡ್ ಆಗಬೇಕು ಎಂಬುದು ನನ್ನ ಅಸೆ. ಈ ಕುರಿತು ನಾನು, ನನ್ನ ತಂಡ ಸುಮಾರು ಆರು ತಿಂಗಳಿನಿಂದ ಶ್ರಮ ಪಡುತ್ತಿದ್ದೇವೆ. ಇಡೀ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯಲಿದೆ. ಅಲ್ಲಿನ ವಿಶಾಲವಾದ ಜಾಗದಲ್ಲಿ ಸೆಟ್ ಗಳನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ದಿನ ಸುಮಾರು 160 ಕ್ಕೂ ಹೆಚ್ಚು ಜನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಜೂನ್ 16 ರಿಂದ ಐದು ದಿನಗಳ ಕಾಲ ಚಿತ್ರೀಕರಣ ನಡೆಯುವ ಸ್ಥಳದಲ್ಲಿಯೇ ತಾಲೀಮು ನಡೆಸಲಿದ್ದೇವೆ. ಆನಂತರ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಹದಿನಾರು ದಿನದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಚಿತ್ರೀಕರಣವಾದ ನಂತರ ಎಲ್ಲಾ ಕಾರ್ಯಗಳನ್ನು ಪೂರೈಸಿ ಜುಲೈ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ನಮ್ಮ ಕಾರ್ಯವೈಖರಿ ವೀಕ್ಷಿಸಲು ಆರು ಜನ ತೀರ್ಪುಗಾರರು ಆ ಸ್ಥಳದಲ್ಲೇ ಇರುತ್ತಾರೆ’ ಎಂದು ವಿವರ ನೀಡಿದರು.
Related Articles
Advertisement
ಹನುಮಂತರಾಜು, ಲತಾ ರಾಗ ಹಾಗೂ ಅನಿಲ್ ಜೈನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ದೇವರ ಆಟ ಬಲ್ಲವರಾರು ಚಿತ್ರಕ್ಕೆ ಪ್ರತಿಯೊಬ್ಬ ಮನುಷ್ಯನ ಒಳಗೆ ಒಂದು ಕ್ರೂರ ಮೃಗ ಇದ್ದೆ ಇರುತ್ತದೆ ಎಂಬ ಅಡಿಬರಹವಿದೆ