Advertisement
ನಗರದ ಬಾಲಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ನಡೆದ ಡಿ.ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಡಿ. ದೇವರಾಜ ಅರಸು ಅವರ ವರ್ಚಸ್ಸು, ಅವರ ಕೊಡುಗೆಗಳು, ಜಾರಿಗೆ ತಂದ ಕಾಯ್ದೆಗಳು ಸಾರ್ವ ಕಾಲಿಕ. ತುಳಿತಕ್ಕೊಳಗಾದವರ ವರ್ಗಗಳಿಗೆ ಸ್ಥಾನಮಾನ ಕಲ್ಪಿಸಿಕೊಟ್ಟ ಧೀಮಂತ ವ್ಯಕ್ತಿತ್ವ ಅವರದು ಎಂದರು.
ಅರಸು ಕುರಿತಾಗಿ ಸಚ್ಚಿದಾನಂದ ಸ್ವಾಮಿಯವರು ಸಾಕಷ್ಟು ಲೇಖನಗಳನ್ನು ಬರೆದಿದ್ದು, ಅವರ ರಾಜಕೀಯ, ವೈಯಕ್ತಿಕ ಜೀವನ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಅವರ ಶ್ರಮ ಸಾರ್ಥಕವಾದದು ಎಂದರು.
ಜಿಲ್ಲಾ ಮಡಿವಾಳ ಸಂಘಕ್ಕೆ ಡಿ.ದೇವರಾಜ ಅರಸು ಪ್ರಶಸ್ತಿ, 50 ಸಾವಿರ ರೂ. ಚೆಕ್‌ನ್ನು ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷ್ಮಣ್ ಅವರಿಗೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ.ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ವಿ ಅಜಯ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ ಎಸ್.ಆರ್., ಹಿಂದುಳಿದ ವರ್ಗಗಳ ಮುಖಂಡರಾದ ಎಸ್.ನಾಗಣ್ಣ, ಆಂಜನಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಉದಯವಾಣಿ ಹಿರಿಯ ಜಿಲ್ಲಾ ವರದಿಗಾರ ಚಿ.ನಿ.ಪುರುಷೋತ್ತಮ್, ವಿವಿಧ ಹಿಂದುಳಿದ ವರ್ಗದ ಸಮಾಜದ ಮುಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು