Advertisement

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

11:50 AM Oct 06, 2024 | Team Udayavani |

ಬೆಂಗಳೂರು: ದಿ ದೇವರಾಜು ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ನಡೆದಿದ್ದ ಕೋಟ್ಯಂತರ ರೂ. ಅಕ್ರಮ ಸಂಬಂಧ ಮತ್ತೂಬ್ಬ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಪಂಚಾಯತ್‌ ರಾಜ್‌ ಇಲಾಖೆಯ ಮಾಗಡಿ ಉಪ ವಿಭಾಗದ ಎಇಇ ಚರಣ್‌ ಕುಮಾರ್‌ ಎಂಬುವರನ್ನು ಬಂಧಿಸಲಾಗಿದೆ. ಆರೋಪಿಯನ್ನು ಶುಕ್ರವಾರ ರಾತ್ರಿ ಬಂಧಿಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚರಣ್‌ ಕುಮಾರ್‌ ನಿಯೋಜನೆ ಮೇರೆಗೆ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಯಮಿತಕ್ಕೆ ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿ ಕಾಮಗಾರಿ ನಡೆಯದಿದ್ದರೂ ಹಲವು ಕಾಮಗಾರಿಗಳು ನಡೆದಿರುವುದಾಗಿ ದೃಢೀಕರಿಸಿದ್ದರು ಎಂಬುದು ಗೊತ್ತಾಗಿದೆ. ಕೆಲವರ ಒತ್ತಡಕ್ಕೊಳಗಾಗಿ ದೃಢೀಕರಣ ಪತ್ರ ನೀಡಿದ್ದಾಗಿ ಆರೋಪಿ ವಿಚಾರಣೆ ವೇಳೆ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಇದೇ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ, ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌.ವೀರಯ್ಯ, ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್‌.ಶಂಕರಪ್ಪ ಹಾಗೂ ಅವರ ಸಹೋದರ, ರಾಮನಗರ ಜಿಲ್ಲೆ ಮಾಯಾಗನಹಳ್ಳಿಯ ನಿವಾಸಿ ಹೊನ್ನಪ್ಪ ಅವರನ್ನು ಬಂಧಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next