Advertisement

CM Siddaramaiah ಸಂತ್ರಸ್ತೆಯ ದೂರಿನ ಮೇರೆಗೆ ದೇವರಾಜೇಗೌಡ ಸೆರೆ

11:40 PM May 12, 2024 | Team Udayavani |

ಬೆಂಗಳೂರು: ವಕೀಲ ದೇವರಾಜೇ ಗೌಡ ಅವರನ್ನು ಸಂತ್ರಸ್ತೆಯ ದೂರಿನ ಮೇಲೆ ಬಂಧಿಸಲಾಗಿದೆ. ನಾವು ಪೊಲೀಸ್‌ ತನಿಖೆಯಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಎಸ್‌ಐಟಿ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ವಿಧಾನ ಪರಿಷತ್‌ ಚುಣಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಅಂತಲ್ಲ. ಯಾಕೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ ಅವರಿಗೆ? ಬಿಜೆಪಿಯವರಿಗೆ ಸುಳ್ಳು ಆರೋಪ ಮಾಡುವುದೇ ಕಸುಬು ಎಂದು ಟೀಕಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next