Advertisement

Devarajegowda ಜಾಮೀನು ಅರ್ಜಿ ವಿಚಾರಣೆ ಇಂದು

09:33 PM May 28, 2024 | Team Udayavani |

ಹಾಸನ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಪ್ರಕರಣದಲ್ಲಿ ಜೂ. 7ರ ವರೆಗೂ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ಜಾಮೀನು ಅರ್ಜಿಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.

Advertisement

ಹಾಸನದ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ದೇವರಾಜೇಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಆದರೆ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು.

ರೇವಣ್ಣ ನಿವಾಸಕ್ಕೆ ಎಸ್‌ಐಟಿ ತಂಡ ಮತ್ತೆ ಭೇಟಿ: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಹೊಳೆನರಸೀಪುರದ ರೇವಣ್ಣ ಅವರ ನಿವಾಸ, ಫಾರಂ ಹೌಸ್‌ ಹಾಗೂ ಹಾಸನದ ಸಂಸದರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಕ್ಷಾಧಾರಗಳನ್ನು ಸಂಗ್ರಹಿಸಿತು.

Advertisement

Udayavani is now on Telegram. Click here to join our channel and stay updated with the latest news.

Next