Advertisement

3ರಿಂದ ದೇವೀರಮ್ಮ ದೀಪೋತ್ಸವ

09:23 PM Nov 11, 2020 | Suhan S |

ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಶ್ರೀದೇವಿರಮ್ಮನವರ ದೀಪೋತ್ಸವ ನ.13 ರಿಂದ 17 ರವರೆಗೆ ನಡೆಯಲಿದ್ದು, ಕೋವಿಡ್‌-19ರ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದ್ದಾರೆ.

Advertisement

ಮಂಗಳವಾರ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಭಕ್ತಾ ದಿಗಳ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ನ.14ರಂದುಶ್ರೀ ದೇವೀರಮ್ಮ ಬೆಟ್ಟಕ್ಕೆ ಹತ್ತುವುದನ್ನು ಈ ವರ್ಷ ಮುಂದೂಡಲಾಗಿದೆ. ಶ್ರೀದೇವಿರಮ್ಮನವರ ಬೆಟ್ಟವು ಅತ್ಯಂತ ಕಡಿದಾಗಿದ್ದು, ಬೆಟ್ಟಕ್ಕೆ ಹತ್ತುವ ಮಾರ್ಗಗಳು ತುಂಬಾ ಕಿರಿದಾಗಿರುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾ ಗಳು ಆಗಮಿಸುವುದ ರಿಂದ ಬೆಟ್ಟಕ್ಕೆ ಹತ್ತುವ ಈ ಸಂದರ್ಭದಲ್ಲಿ ಸಾಮಾಜಿಕಅಂತರವನ್ನು ಕಾಯ್ದುಕೊಳ್ಳುವುದು ಕಷ್ಟ ಸಾಧ್ಯವಿದ್ದು, ಕೋವಿಡ್‌ ಸಾಂಕ್ರಾಮಿಕ ರೋಗವು ಹರಡುವ ಸಾಧ್ಯತೆ ಹೆಚ್ಚಾಗಿದೆ.

ಈ ವರ್ಷ ಕೋವಿಡ್‌-19 ಸಾಂಕ್ರಾಮಿಕ ಕಾಯಿಲೆಯು ಜಗತ್ತನ್ನು ಕಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ರೋಗಕ್ಕೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ರೋಗವು ಬಹುಬೇಗ, ವೇಗವಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಖಗವಸು ಧರಿಸುವಿಕೆ, ಕನಿಷ್ಠ 6ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಥರ್ಮಲ್‌ ಸ್ಕ್ಯಾನಿಂಗ್‌ ಮತ್ತು ಕೈ ತೊಳೆಯುವಿಕೆ ಅಥವಾ ಸ್ಯಾನಿಟೈಸರ್‌ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಅನುಮತಿ ನೀಡಲು ನಿರ್ದೇಶನ ನೀಡಿದ್ದು ಈ ಮಾರ್ಗಸೂಚಿಗಳು ನ.30 ರವರೆಗೆ ಜಾರಿಯಲ್ಲಿರುತ್ತವೆ.

ಮೇಲ್ಕಂಡ ಕಾರಣಗಳ ಹಿನ್ನಲೆಯಲ್ಲಿ ಶ್ರೀ ದೇವಿರಮ್ಮ ಬೆಟ್ಟ ಹತ್ತುವ ಮತ್ತು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳು, ಸಾರ್ವಜನಿಕರು, ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ನೀಡುತ್ತಿರುವ ಸಲಹಾ ಟಿಪ್ಪಣಿಯನ್ನು ಪಾಲಿಸಿ ಈ ಬಾರಿ ದೇವಿರಮ್ಮನವರ ಬೆಟ್ಟ ಹತ್ತುವುದನ್ನು ಈ ವರ್ಷದ ಮಟ್ಟಿಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next