Advertisement

ದೇವೇಗೌಡರಿಂದ ಪ್ರಧಾನಿ, ಸಿಎಂಗೆ ಪತ್ರ

08:00 AM Oct 23, 2017 | Team Udayavani |

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆ ಹಾನಿಗೊಳಗಾಗಿದ್ದು, ರೈತರಿಗೆ ಪರಿಹಾರ ಕಲ್ಪಿಸುವ ಸಂಬಂಧ
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದರ ಜತೆಗೆ ನೇರವಾಗಿ ಭೇಟಿ ಮಾಡಿ ಚರ್ಚಿಸಲು ಸಮಯಾವಕಾಶ ಕೇಳಲಾಗುವುದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಹಾನಿಗೊಳಗಾಗಿದ್ದು, ಸೋಮವಾರ ಮತ್ತು ಮಂಗಳವಾರದಂದು ನಾನು ಆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದೇನೆ.

ಆ ನಂತರ ರೈತರಿಗೆ ಪರಿಹಾರ ಕಲ್ಪಿಸುವ ಸಂಬಂಧ ಪ್ರಧಾನಿ ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆಯಲಿದ್ದೇನೆ. ಜೊತೆಗೆ ಖುದ್ದು ಭೇಟಿಯಾಗಿ ಚರ್ಚಿಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿಯವರ ಸಮಯಾವಕಾಶ ಸಹ ಕೋರಲಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next