Advertisement

ಶಾಸಕರ ಜತೆ ದೇವೇಗೌಡ, ಕುಮಾರಸ್ವಾಮಿ ಸಭೆ 

06:00 AM Oct 17, 2018 | Team Udayavani |

ಬೆಂಗಳೂರು: ಉಪ ಚುನಾವಣೆ ಕಾರ್ಯತಂತ್ರ ಹಾಗೂ ಜವಾಬ್ದಾರಿ ಹಂಚಿಕೆ ಸಂಬಂಧ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಜೆಡಿಎಸ್‌ ಶಾಸಕರ ಜತೆ ಸಮಾಲೋಚನೆ ನಡೆಸಿದರು. ಕೆಆರ್‌ಎಸ್‌ ಸಮೀಪದ ರೆಸಾರ್ಟ್‌ನಲ್ಲಿ ನಡೆದ ಸಭೆಯಲ್ಲಿ, ರಾಮನಗರ, ಮಂಡ್ಯ, ಶಿವಮೊಗ್ಗ ಕ್ಷೇತ್ರಗಳಲ್ಲಿ ಜೆಡಿಎಸ್‌, ಬಳ್ಳಾರಿ ಹಾಗೂ
ಜಮಖಂಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲು ಎಲ್ಲರೂ ಒಟ್ಟುಗೂಡಿ ಕೆಲಸ ಮಾಡಬೇಕು. ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಶಾಸಕರು, ಸಚಿವರಿಗೆ ಹೊಣೆಗಾರಿಕೆ ನೀಡಲಾಗುವುದು. ಮತದಾನ ಮುಗಿಯುವವರೆಗೆ ಅಲ್ಲೇ ವಾಸ್ತವ್ಯ ಹೂಡಿ ಜಾತಿವಾರು, ಸಮುದಾಯವಾರು ಮತಗಳನ್ನು ಸೆಳೆದು ಸಮ್ಮಿಶ್ರ ಸರ್ಕಾರದ ಸಾಧನೆ ತಿಳಿಸಿ ಮತ ಪಡೆಯಬೇಕೆಂದು ಸಭೆಯಲ್ಲಿ ಎಚ್‌.ಡಿ.ದೇವೇಗೌಡರು ಸೂಚಿಸಿದರು ಎಂದು ಹೇಳಲಾಗಿದೆ.

Advertisement

ಅ.20ಕ್ಕೆ ಸಭೆ: ಈ ಮಧ್ಯೆ, ಬೆಂಗಳೂರಿನಲ್ಲಿ ಮಾತನಾಡಿದ ಎಚ್‌.ಡಿ.ದೇವೇಗೌಡರು, ಅ.20ರಂದು ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ಸಭೆಯಿದೆ. ಸಭೆ ಬಳಿಕ ನಾನು, ಕುಮಾರಸ್ವಾಮಿ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತೇವೆ ಎಂದು ಹೇಳಿದರು. ರಾಷ್ಟ್ರೀಯ ಮಟ್ಟದಲ್ಲಿ ಇತ್ತೀಚೆಗೆ
ನಡೆಯುತ್ತಿರುವ ವಿದ್ಯಮಾನಗಳಿಂದ ಮಹಾಘಟಬಂಧನ್‌ ರಚನೆಗೆ ಅಡ್ಡಿಯಾಗಿಲ್ಲವೇ ಎಂಬ ಪ್ರಶ್ನೆಗೆ ಏನೂ ಆಗಿಲ್ಲ. ಪರಸ್ಪರ ದೂರ ಇದ್ದ ಜೆಡಿಎಸ್‌-ಕಾಂಗ್ರೆಸ್‌ ಇಷ್ಟು ಹತ್ತಿರ ಬಂದಿರೋದು ಮಹಾಘಟಬಂಧನ್‌ನ ಮೊದಲ ಹೆಜ್ಜೆ ಅಲ್ಲವೇ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next