Advertisement

ರಾಷ್ಟ್ರಪತಿ ಸ್ಥಾನಕ್ಕೆ ದೇವೇಗೌಡರು ಸ್ಪರ್ಧಿಸಲ್ಲ: ಎಚ್‌.ಡಿ .ಕುಮಾರಸ್ವಾಮಿ

08:41 PM Jun 17, 2022 | Team Udayavani |

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌. ಡಿ.ದೇವೇಗೌಡರು ರಾಷ್ಟ್ರಪತಿ ಹು¨ªೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Advertisement

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ಜೂನ್‌ 20ರಂದು ಮತ್ತೂಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುತ್ತದೆ ಎಂದು ಹೇಳಿದರು.

ದೇವೇಗೌಡರಿಗೆ ಜೀವನದಲ್ಲಿ ಒಮ್ಮೆ ಕರ್ನಾಟಕದಲ್ಲಿ ಜೆಡಿಎಸ್‌ ಪಕ್ಷದ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ. ಸ್ವತಂತ್ರ ಸರ್ಕಾರದ ಬಗ್ಗೆ ಅವರ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಆದರ ಹೊರತಾಗಿ, ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next