Advertisement

ಮಹಿಳಾ ಮೀಸಲಾತಿ ಮಸೂದೆ: ಮೋದಿಗೆ ಗೌಡರಿಂದ ಪತ್ರ

04:20 AM Jul 19, 2017 | Team Udayavani |

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಮುಂದಾಗುವಂತೆ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. 1996ರಲ್ಲಿ ನಾನು ಪ್ರಧಾನಿಯಾಗಿದ್ದಾಗ ಮಹಿಳಾ ಮೀಸಲಾತಿ ಮಸೂದೆ ಸಂಸತ್‌ನ ಮುಂದೆ ತಂದಿದ್ದೆ. ಆದರೆ, ಲೋಕಸಭೆಯಲ್ಲಿ ಅಂಗೀಕಾರವಾಗಲಿಲ್ಲ. 2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರವಾಯಿತು. ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಪ್ರಯತ್ನಪಟ್ಟರು. ಆದರೆ, ಅದು ಫ‌ಲ ನೀಡಲಿಲ್ಲ. 21 ವರ್ಷ ಆದರೂ ಮಸೂದೆ ಅಂಗೀಕಾರವಾಗಿಲ್ಲ. ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರ ಮಾಡುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಕೋರಿದ್ದಾರೆ. ನಮ್ಮ ಪಕ್ಷ ಮಹಿಳೆಯರ ಹಕ್ಕಿಗೆ ಹೆಚ್ಚಿನ ಮಹತ್ವ ನೀಡಿದೆ. ರಾಜ್ಯದಲ್ಲಿ, ಲೋಕಸಭೆಯಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿ ನೀಡಲು ನೀವು ಪ್ರಯತ್ನ ಪಡುತ್ತೀರಾ ಎಂದು ನಂಬಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next