Advertisement

“ಗಾಂಧೀಜಿ, ಶಾಸ್ತ್ರೀ ಆದರ್ಶಗಳೇ ದಾರಿ ದೀಪ’:  ಎಚ್‌.ಡಿ.ದೇವೇಗೌಡ

11:34 AM Oct 03, 2018 | |

ಬೆಂಗಳೂರು: ಪ್ರಜಾಪ್ರಭುತ್ವ ಉಳಿಸಲು ಮಹಾತ್ಮಾ ಗಾಂಧಿ ಮತ್ತು ಲಾಲ್‌ಬಹದ್ದೂರ್‌ ಶಾಸ್ತ್ರೀ  ಅವರ ಆದರ್ಶಗಳೇ  ನಮಗೆ ದಾರಿದೀಪ ಎಂದು ಮಾಜಿ ಪ್ರಧಾನಿ  ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

Advertisement

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧಿ ಮತ್ತು ಶಾಸ್ತ್ರೀ ಅವರ ಜನ್ಮ ದಿನಾಚರಣೆಗೆ ಮಾತ್ರ ಸೀಮಿತವಾಗದೆ  ಅವರ  ಆದರ್ಶ ಪಾಲಿಸಬೇಕು ಎಂದು ಹೇಳಿದರು.ಲಾಲ್‌ ಬಹದ್ದೂರ್‌ ಶಾಸ್ತ್ರೀಯವರು ಉತ್ತಮ ಆಡಳಿತ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದರು. ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಸ್ತ್ರೀಯವರ ಜೀವನ ಹಾಗೂ ಸರಳತೆ ತಿಳಿದುಕೊಳ್ಳಬೇಕು. ಜೀವನದಲ್ಲಿ ಪಾಲಿಸಬೇಕು ಎಂದು ಕರೆ ನೀಡಿದರು.

ಇಂದು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಜಾತ್ಯತೀತ ಶಕ್ತಿಗಳನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕು. ಈ ವಿಚಾರದಲ್ಲಿ ತ್ಯಾಗ ಮನೋಭಾವವೂ ಅಗತ್ಯ ಎಂದು ಹೇಳಿದರು.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಮಾತನಾಡಿ.  ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಜೀವನವೇ ಒಂದು ಸಂದೇಶ. ಎಲ್ಲ ಜಾತಿ ಜನಾಂಗ ಒಟ್ಟಾಗಿ ಬದುಕಬೇಕು ಎನ್ನುವ ಆಶಯ ಮತ್ತು ಸಂದೇಶ ಸಾರಿದವರು ಗಾಂಧೀಜಿಯವರು ಎಂದು ಹೇಳಿದರು. ಲಾಲ್‌ ಬಹದ್ದೂರ್‌ ಶಾಸ್ತ್ರೀಯವರು ಪ್ರಾಮಾಣಿಕ ರಾಜಕಾರಣಕ್ಕೆ ಜೀವಂತ ಸಾಕ್ಷಿಯಾಗಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next