Advertisement
ಶನಿವಾರ ನಗರದ ದರಬಾರ್ ಹೈಸ್ಕೂಲ್ ಆವರಣದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾಡಳಿತ, ಜಿಪಂ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯೋಗಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ನಡೆದ ಎರಡು ದಿನಗಳ ಮಿನಿ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉದ್ಯೋಗಾಕಾಂಕ್ಷಿಗಳು ಕೇಂದ್ರ ಸರ್ಕಾರದ ಉದ್ಯೋಗಾಧಾರಿತ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಮೇಲ್ಮನೆ ಸದಸ್ಯ ಅರುಣ ಶಹಾಪುರ ಮಾತನಾಡಿ, ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ದಿಶೆಯಲ್ಲಿ ಇಂತಹ ಉದ್ಯೋಗ ಮೇಳಗಳು ಮುಖ್ಯ ವೇದಿಕೆಯಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರುದ್ಯೋಗಿ ಯುವ ಜನಾಂಗಕ್ಕೆ ಉದ್ಯೋಗಾವಕಾಶ ಕಲ್ಪಿಸಲು ಬದ್ಧವಾಗಿದೆ ಎಂದು ಹೇಳಿದರು.
Related Articles
ಮೂಲಕ ವಿಫುಲ ಅವಕಾಶ ಕಲ್ಪಿಸಿರುವುದು ಸಂತಸದ ವಿಷಯವಾಗಿದೆ ಎಂದರು.
Advertisement
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಮತ್ತು ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಹಮ್ಮಿಕೊಂಡಿದೆ. ಇಲ್ಲಿ ಭಾಗವಹಿಸಿದ ವಿವಿಧ ಉದ್ದಿಮೆ ಹಾಗೂ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಲಾಗಿದೆ. ಅವಳಿ ಜಿಲ್ಲೆಗಳ ನಿರುದ್ಯೋಗಿ ಯುವ ಜನಾಂಗಕ್ಕೆ ಸ್ಥಳದಲ್ಲೇ ದ್ಯೋಗಾವಕಾಶ ಕಲ್ಪಿಸುತ್ತಿದ್ದೇವೆ. ಇಲ್ಲಿ ನೇಮಕ ಮಾಡಿಕೊಳ್ಳುವ ಉದ್ಯೋಗದಾತರು ಕೂಡ ಅಭ್ಯರ್ಥಿಗಳ ಭವಿಷ್ಯಕ್ಕಾಗಿ ಉದ್ಯೋಗ ಖಾತ್ರಿ ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ವಿವಿಧ ಕಂಪನಿಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಸೇವಾ ಭದ್ರತೆ ಕಲ್ಪಿಸುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಯಾವುದೇ ಸಂದರ್ಭದಲ್ಲಿ ಮೋಸ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ನೇಮಕ ಮಾಡಿಕೊಂಡು ಉದ್ಯೋಗ ಕಲ್ಪಿಸಲು ಯಾವುದೇ ರೀತಿಯ ತೊಂದರೆ ನೀಡುವಂತಹ ಉದ್ಯೋಗದಾತ ಕಂಪನಿಗಳ ವಿರುದ್ಧ ಸಹ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ 67ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಆನ್‌ಲೈನ್ ಮೂಲಕ ಹಾಗೂ ಆಫ್‌ಲೈನ್ ಮೂಲಕವೂ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತಿದೆ. ಜಿಪಂ ಸಿಇಒ ವಿಕಾಸ ಸುರಳಕರ, ಕೆಐಎಡಿಬಿ ಅಧ್ಯಕ್ಷ ಎಸ್.ಬಿ. ಪಾಟೀಲ, ಎಡಿಸಿ ಎಚ್.ಪ್ರಸನ್ನ, ಮೇಯರ್ ಶ್ರೀದೇವಿಲೋಗಾವಿ, ವಾಣಿಜ್ಯ ಮಂಡಳಿ ಅಧ್ಯಕ್ಷ ದೊಡ್ಡಪ್ಪ ಗುಡ್ಡೊಡಗಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ರಮೇಶ ದೇಸಾಯಿ ಇದ್ದರು. ಕೌಶಲ್ಯಾಭಿವೃದ್ಧಿ ಇಲಾಖೆಯ ಸುನಂದಾ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ವಂದಿಸಿದರು.