Advertisement

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ

02:27 PM Oct 06, 2018 | Team Udayavani |

ರಾಯಚೂರು: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು. ಅಂದಾಗ ಅವರಲ್ಲಿಯೂ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಕುಂಟೆಪ್ಪ ಗೌರಿಪುರ ಹೇಳಿದರು.

Advertisement

ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಹಯೋಗದಲ್ಲಿ ನಗರದ ನವಯುಗ
ಪದವಿ ಪೂರ್ವ ಕಾಲೇಜ್‌ನಲ್ಲಿ ನಡೆದ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2018ರ ಜಿಲ್ಲಾ ಮಾರ್ಗದರ್ಶಿ
ಅಧ್ಯಾಪಕರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ವಿಜ್ಞಾನ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ ಅವರನ್ನು ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಾಡಬೇಕು. ಅವರಿಗೆ ಸ್ಪರ್ಧೆಯ ಸಂಪೂರ್ಣ ಮಾಹಿತಿ ನೀಡಿ ಅವರನ್ನು ಸಜ್ಜುಗೊಳಿಸುವ ಜವಾಬ್ದಾರಿ ಮಾರ್ಗದರ್ಶಿ ಅಧ್ಯಾಪಕರ ಮೇಲಿದೆ. ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಸಲು ಪ್ರೇರೇಪಿಸಬೇಕಿದೆ ಎಂದರು.

ವಿಜ್ಞಾನ ಶಿಕ್ಷಕರ ಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ. ಶಾಲೆಗಳಲ್ಲಿ ಕಲಿತ ವಿಜ್ಞಾನ ಚಿಂತನೆಗಳು ವಿದ್ಯಾರ್ಥಿಗಳ
ಮನಸ್ಸಿನ ಮೇಲೆ ಭಾರೀ ಪರಿಣಾಮ ಬೀರುತ್ತವೆ. ಮುಂದೆ ಅವರು ವಿಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಬಲ್ಲರು ಎಂದರು. ನವಯುಗ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿಜ್ಞೆಶ್ವರನ್‌ ಮಾತನಾಡಿ, ವಿಶ್ವವಿದ್ಯಾಲಯಗಳಲ್ಲಿನ ಪ್ರಾಧ್ಯಾಪಕರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ. ಆದರೆ, ಶಾಲಾ ಹಂತದಲ್ಲಿಯೇ ಶಿಕ್ಷಕರು ಮಾರ್ಗದರ್ಶನ ನೀಡುತ್ತಿರುವುದು ಸಂತಸದ ವಿಚಾರ ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನ ಜೀವನದ ಅವಿಭಾಜ್ಯ ಅಂಗಳಾಗಿವೆ. ಒಂದು ಕ್ಷಣ ಕೂಡ ಅವುಗಳನ್ನು ಬಿಟ್ಟಿರಲಾರದ ಸ್ಥಿತಿಗೆ ತಲುಪಿದ್ದೇವೆ. ಹೀಗಾಗಿ ವಿಜ್ಞಾನ ಬೆಳದರೆ ನಾವೂ ಬದಲಾಗುತ್ತೇವೆ ಎಂದರು.

Advertisement

ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಸಮನ್ವಯಾಧಿಕಾರಿ ಸಂತೋಷ ಪ್ರಾಸ್ತಾವಿಕ ಮಾತನಾಡಿದರು. ರಾಯಚೂರು ಕೃಷಿ ವಿವಿ ಪ್ರಾಧ್ಯಾಪಕ ಡಾ| ಪ್ರಕಾಶ, ಡಾ| ರಾಮಪ್ಪ ಮತ್ತು ರವೀಶ ಇದ್ದರು. ಪರಿಷತ್‌
ಜಿಲ್ಲಾ ಸದಸ್ಯ ವೆಂಕಟೇಶ ಬೇವಿನಬೆಂಚಿ ಸ್ವಾಗತಿಸಿದರು. ಛಾಯಾ ವಂದಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next