Advertisement

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಸಾಲಿಮಠ

05:42 PM Nov 30, 2021 | Team Udayavani |

ಬಾಗಲಕೋಟೆ: ಕ್ರೀಡೆ ನಮ್ಮ ಜೀವನದ ಪ್ರಮುಖ ಭಾಗವಾಗಿದ್ದು, ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬೆಳಗಾವಿ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ ಸಾಲಿಮಠ ಹೇಳಿದರು.

Advertisement

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಗಳ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಕ್ರೀಡೆಗಳು ದೈಹಿಕ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿ ಮೂಲವಾಗಿದೆ. ಆದ್ದರಿಂದ ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಳಗಾವಿ ವೃತ್ತ ಮಟ್ಟದಲ್ಲಿ ಅರಣ್ಯ ಇಲಾಖೆಯ ಒಟ್ಟು 1039 ನೌಕರರಿದ್ದು, ಈ ಪೈಕಿ 316 ಜನ ಮಾತ್ರ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ. ಶೇ.50 ರಷ್ಟು ಜನ ಸಹ ಭಾಗವಹಿಸಿಲ್ಲ. ಅಲ್ಲದೇ ಮಹಿಳಾ ವಿಭಾಗದಲ್ಲಿ ಶೇ. 10ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸಿಲ್ಲ. 17 ಜನ ಮಹಿಳೆಯರು ಮಾತ್ರ ಭಾಗವಹಿಸಿದ್ದಾರೆ. ಮುಂದಿನ ವರ್ಷದಲ್ಲಾದರೂ ಪ್ರತಿಯೊಬ್ಬರಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

ಪ್ರತಿ ವರ್ಷ ಬೆಳಗಾವಿಯಲ್ಲೇ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿತ್ತು. ಈ ಬಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದು, ಬಾಗಲಕೋಟೆ ಅರಣ್ಯ ಇಲಾಖೆಯ ಅ ಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಕ್ರೀಡಾಕೂಟ ನಡೆಸಿಕೊಟ್ಟಿದ್ದಾರೆ. ಮುಂದಿನ ವರ್ಷ ವಿಜಯಪುರ ಜಿಲ್ಲೆಯಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು. ಬೆಳಗಾವಿ ವೃತ್ತ ಮಟ್ಟದಲ್ಲಿ ವಿಜೇತರಾದವರು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಹೆಚ್ಚಿನ ಪದಕ ಗಳಿಸಬೇಕೆಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿ ಕಾರಿ ಪ್ರಶಾಂತ ಸಂಕಿನಮಠ, ಜಿಲ್ಲಾ ಕ್ರೀಡಾ ಇಲಾಖೆಯ ತರಬೇತಿಗಾರ್ತಿ ಅನಿತಾ ನಿಂಬರಗಿ, ಬೆಳಗಾವಿ ವೃತ್ತದ ಎಸಿಎಫ್‌ ಸುನಿತಾ ನಿಂಬರಗಿ, ಬಾಗಲಕೋಟೆ ಡಿಸಿಎಂ ಪ್ರಶಾಂತ ಉಪಸ್ಥಿತರಿದ್ದರು.

Advertisement

ಬಾಗಲಕೋಟೆ ಅರಣ್ಯ ವಿಭಾಗಕ್ಕೆ ಸಮಗ್ರ ವೀರಾಗ್ರಣಿ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ
ಕ್ರೀಡಾಕೂಟದಲ್ಲಿ ಬಾಗಲಕೋಟೆ ಅರಣ್ಯ ವಿಭಾಗವು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದೆ. ಬೆಳಗಾವಿ ಅರಣ್ಯ ವಿಭಾಗವು ದ್ವಿತೀಯ ಸ್ಥಾನ ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಬೆಳಗಾವಿಯ ಸಾಮಾಜಿಕ ಅರಣ್ಯ ವಿಭಾಗದ ಅರಣ್ಯ ರಕ್ಷಕ ಪರಶುರಾಮ ಮುಂಜೆ ವೈಯಕ್ತಿಕ ವಿರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮಹಿಳಾ ವಿಭಾಗದಲ್ಲಿ ಬಾಗಲಕೋಟೆಯ ಅರಣ್ಯ ರಕ್ಷಕಿ ಸರಸ್ವತಿ ಮಜ್ಜಿಗೆ ವೈ‌ಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next