Advertisement

ಆದ್ಯತೆ ಮೇರೆಗೆ ಸರ್ಕಾರಿ ಶಾಲೆ ಅಭಿವೃದ್ಧಿಗೊಳಿಸಿ

03:09 PM Sep 26, 2020 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಸರ್ಕಾರಿ ಫ್ರೌಡ ಶಾಲೆಗಳನ್ನು ಕಾಲ ಮಿತಿಯೊಳಗೆ ಮಾದರಿ ಶಾಲೆಗಳನ್ನಾಗಿ ನಿರ್ಮಾಣ ಮಾಡಲು ಅಧಿಕಾರಿಗಳು ಆದ್ಯತೆ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ಬಿ. ಫೌಝೀಯಾ ತರುನ್ನುಮ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು,ಮಜಿ ನರೇಗಾ ಯೋಜನೆಯಡಿ ಯಲ್ಲಿ ಜಿಲ್ಲೆಯ ಸರ್ಕಾರಿ ಫ್ರೌಡ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಈಗಾಗಲೇ ಸರ್ಕಾರಿ ಫ್ರೌಢ ಶಾಲೆಗಳಅಭಿವೃದ್ಧಿಗಾಗಿಅಧಿಕಾರಿಗಳು ಕೈಗೊಂಡಿರುವ ತರಗತಿ ಕೊಠಡಿ, ಸ್ಮಾರ್ಟ್‌ಕ್ಲಾಸ್‌, ಕುರ್ಚಿಗಳು ಸೇರಿದಂತೆ ಅವಶ್ಯಕ ಸೌಲಭ್ಯಗಳು ಕಲ್ಪಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.

ನೋಡಲ್‌ ಅಧಿಕಾರಿಗಳ ನೇಮಕ: ಮಾದರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೀಡುತ್ತಿರುವ ಮತ್ತು 9ನೇ ತರಗತಿ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ನೇಮಕಗೊಂಡಿರುವ ನೋಡಲ್‌ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕೆಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎಸ್‌. ನಾಗೇಶ್‌, ಡಯಟ್‌ ಉಪ ನಿರ್ದೇಶಕ ರಘುನಾಥ್‌ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next