Advertisement

ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ: ಯು.ಟಿ.ಖಾದರ್‌

03:59 PM May 27, 2023 | Team Udayavani |

ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದ ಜನತೆ ವಿಶ್ವಾಸದಿಂದ ಮತ ಹಾಕಿ ಗೆಲ್ಲಿಸಿ ಕೊಟ್ಟ ಕಾರಣ ಈ ಪದವಿಗೆ ಮುಟ್ಟಲು ಸಾಧ್ಯವಾಗಿದೆ. ಸಭಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೂ ಕ್ಷೇತ್ರದ ಜನರ ನಿಕಟ ಸಂಪರ್ಕಕಕ್ಕೆ ಅಧಿಕಾರ ಅಡ್ಡ ಬರುವುದಿಲ್ಲ. ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಮುಂದಿನ ಐದು ವರುಷದಲ್ಲಿ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುತ್ತೇನೆ ಎಂದು ವಿಧಾನಸಭಾ ಸ್ಪೀಕರ್‌ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.

Advertisement

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷತೆ ಯನ್ನು ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರು ವಿಧಾನಸಭಾ ಕ್ಷೇತ್ರದ ಧಾರ್ಮಿಕ ಕ್ಷೇತ್ರಗಳಿಗ ಭೇಟಿ ನೀಡಿದ ಸಂದರ್ಭದಲ್ಲಿ ಉಳ್ಳಾಲ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿಗೆ
ಬೆಂಗಳೂರಿನಲ್ಲಿ ಸಭೆ ನಡೆಸಿದ್ದೇನೆ
ವಿಧಾನಸಭೆಯ ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ ಯೋಜನೆಗಳ ಅನುಷ್ಠಾನಕ್ಕೆ ನಿರ್ದೇಶನ ನೀಡಿದ್ದೇನೆ. ಪ್ರಮುಖವಾಗಿ ಅನುಷ್ಠಾನಕ್ಕೆ ಬಾಕಿ ಉಳಿದಿರುವ ಶಾಶ್ವತ 24 ಗಂಟೆ ನಿರಂತರ ಕುಡಿಯುವ ನೀರು, ಅಬ್ಬಕ್ಕ ಸರ್ಕಲ್‌ನಿಂದ ಮುಕ್ಕಚ್ಚೇರಿವರೆಗೆ ಚತುಷ್ಪಥ ಸ್ಮಾರ್ಟ್‌ ರಸ್ತೆ, ಅಬ್ಬಕ್ಕ ಸರ್ಕಲ್‌ನಿಂದ ಬೀಚ್‌ವರೆಗಿನ ರಸ್ತೆ ಸುಂದ ರೀಕರಣ, ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನ ಸೇರಿದಂತೆ ಬಾಕಿ ಉಳಿದಿರುವ ಕಾಮಗಾರಿಯನ್ನು ಅನುಷ್ಠಾನ ನಡೆಸಿ ಮುಂದಿನ ಐದು ವರುಷದೊಳಗೆ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುವುದು ಎಂದರು.
ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ. ಹನೀಫ್‌ ಸೇರಿದಂತೆ ದರ್ಗಾ ಸಮಿತಿ ಪದಾಧಿಕಾರಿಗಳು, ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next