Advertisement
ತಾಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿಯ ಚೀಮನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ 13 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಗೋಕುಂಟೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ನೈರ್ಮಲ್ಯ ಕಾಪಾಡಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜಾರಿಗೊಳಿಸಿದ ನರೇಗಾ ಯೋಜನೆಯಿಂದ ಕ್ರಾಂತಿಕಾರಿ ಬದಲಾವಣೆಯಾಗಿದ್ದು, ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದರು. ನರೇಗಾ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲು ಶಾಸಕರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಲಾಗಿದ್ದು, ಯಾವ ಯಾವ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಅದು ಗುಣಮಟ್ಟವಾಗಿದೆಯೇ? ಎಂಬುದನ್ನು ಪರಿಶೀಲಿಸುವ ಹಕ್ಕು ಶಾಸಕರಿಗೆ ನೀಡಲಾಗಿದೆ ಎಂದರು. ಅಬ್ಲೂಡು ಗ್ರಾಪಂನ ಚೀಮನಹಳ್ಳಿ ಗ್ರಾಮದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಬಡವರಿಗೆ ಉಚಿತ ನಿವೇಶನಗಳ ಮಂಜೂರಾತಿ ಸಹಿತ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಮ್ಮ ಅಧಿಕಾರಾವಧಿಯಲ್ಲಿ ನಡೆಸಲಾಗಿದೆ ಎಂದರು.
Advertisement
ನರೇಗಾದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ
01:15 PM Jan 08, 2020 | Suhan S |
Advertisement
Udayavani is now on Telegram. Click here to join our channel and stay updated with the latest news.