Advertisement

ಬೀದರ ಅಭಿವೃದ್ಧಿಗೆ ಡಿಸಿ ಜತೆ ಚರ್ಚೆ

08:50 AM Jun 28, 2020 | Suhan S |

ಬೀದರ: ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಳೆದ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಾಮಗಾರಿ ಕೈಗೊಳ್ಳಲು ಮತ್ತು ಜಿಲ್ಲೆಯನ್ನು ಪ್ರಗತಿ ಪಥದತ್ತ ಕೊಂಡೊಯ್ಯುವ ಕುರಿತು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಜತೆ ಚರ್ಚಿಸಿದ್ದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ‌ ಚರ್ಚೆ ನಡೆಸಿದ ಅವರು ತುರ್ತಾಗಿ ಕೈಗೊಳ್ಳಬೇಕಾದ ಕಾಮಗಾರಿ ಕೈಗೆತ್ತಿ ಕೊಳ್ಳಲು ಸೂಚನೆ ನೀಡಲಾಗಿದೆ. ಎಲ್ಲ ತಾಲೂಕಿನಲ್ಲಿ ಟ್ರೀ ಪಾರ್ಕ್‌, ಜಿಲ್ಲೆಯಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಿಸಲು ರೈತರೊಂದಿಗೆ ಚರ್ಚಿಸಲಾಗುವುದು. ಎಲ್ಲ ತಾಲೂಕುಗಳಲ್ಲಿ ರಸ್ತೆ, ಕುಡಿವ ನೀರು, ಚರಂಡಿ, ವಿದ್ಯುತ್‌ ವ್ಯವಸ್ಥೆ ಸಮರ್ಪಕವಾಗಿರುವಂತೆ ಅಧಿಕಾರಿ ಗಳಿಗೆ ಸೂಚಿಸಲಾಗಿದೆ. ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಟ್ಟಡ ಕಾಮಗಾರಿ ತ್ವರಿತವಾಗಿ ಮುಗಿಸಲು, ಬ್ರಿಮ್ಸ್‌ ಕಾಲೇಜು ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬೀದರನಲ್ಲಿ ನಡೆಯುತ್ತಿರುವ ಒಳಚರಂಡಿ ಮತ್ತು ನೀರು ಸರಬರಾಜು ಕಾಮಗಾರಿ ತ್ವರಿತ ಮುಗಿಸಲು, ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲು ತಿಳಿಸಲಾಗಿದೆ.

ನಗರದಲ್ಲಿ ಮಿನಿ ವಿಧಾನಸೌಧ, ಡಿಸಿ ಕಚೇರಿ, ಜಿಪಂ ಕಚೇರಿ ಕಾಮಗಾರಿ ಕೈಗೆತ್ತಿಕೊಳ್ಳಲು, ನಗರದಲ್ಲಿ ಕನ್ನಡ ಭವನ, ಪತ್ರಿಕಾ ಭವನ ಕಾಮಗಾರಿ ಆರಂಭಿಸುವುದು, ಪಾಪನಾಶ ಕೆರೆ ಜೀರ್ಣೋದ್ಧಾರ, ನಾಂದೇಡ-ಬೀದರ ರೈಲು ಮಾರ್ಗ ಶೀಘ್ರ ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳುವುದು, ಬಸವಕಲ್ಯಾಣದಲ್ಲಿ ಅನುಭವ ಮಂಟಪ ಕಾಮಗಾರಿಗೆ ಚಾಲನೆ ನೀಡುವುದು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next