Advertisement
ಕೇಂದ್ರ ಸರಕಾರದ ಬಂದರು, ನೌಕಾ ಸಾರಿಗೆ ಮತ್ತು ಜಲಮಾರ್ಗಗಳ ಸಚಿವಾಲಯ ಹಾಗೂ ದೀಪಸ್ತಂಭಗಳು ಮತ್ತು ದೀಪನೌಕೆಗಳ ನಿರ್ದೇಶನಾಲಯವು ದೇಶದ 75 ಲೈಟ್‌ಹೌಸ್‌ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ತಮಿಳುನಾಡಿನ ತೂತುಕುಡಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವೀಡಿಯೋ ಕಾನ್ಫರೆನ್ಸ್ ಪ್ರಯುಕ್ತ ಬುಧವಾರ ಕಾಪು ಲೈಟ್‌ಹೌಸ್ ಬಳಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮೀನುಗಾರರಿಗೆ ಅನುಕೂಲವಾಗು ವಂತೆ ಮಲ್ಪೆ ಬಂದರು ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡಿದ್ದು ದೋಣಿಗಳ ದಟ್ಟಣೆ ತಪ್ಪಿಸಲು ಬಂದರು ವಿಸ್ತರಣೆಗೆ ಆದ್ಯತೆ ನೀಡಲಾಗಿದೆ. ಹೆಜಮಾಡಿಯಲ್ಲಿ ನೂತನ ಬಂದರು, ಕುಂದಾಪುರ, ಹಂಗಾರಕಟ್ಟೆ ಬಂದರು ಅಭಿವೃದ್ಧಿ ಯೋಜನೆ ಅನುಷ್ಠಾನ ಹಂತದಲ್ಲಿದೆ. ಕಾಪು ಲೈಟ್‌ಹೌಸ್ ಅಭಿವೃದ್ಧಿ ಹಾಗೂ ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪಡುಬಿದ್ರಿಯಲ್ಲಿ ಬ್ಲೂಫ್ಲ್ಯಾಗ್ ಬೀಚ್‌ಗಳ ನಿರ್ಮಾಣವಾಗಿದೆ. ಪಡುಕೆರೆಯಲ್ಲಿ ಜೆಟ್ಟಿ ನಿರ್ಮಾಣ ಯೋಜನೆ ಅನುಷ್ಠಾನ ಹಂತದಲ್ಲಿದೆ. ಕೇಂದ್ರ ಸರಕಾರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತವೂ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡಬೇಕಿದೆ ಎಂದು ಶೋಭಾ ತಿಳಿಸಿದರು.
Related Articles
ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಯಾಂತ್ರಿಕತೆ ಮತ್ತು ತಾಂತ್ರಿಕತೆ ವೇಗವಾಗಿ ಬೆಳೆಯುತ್ತಿರುವ ಸಮಯದಲ್ಲಿ ಸಮುದ್ರದಲ್ಲಿ ಪಯಣಿಸುವ ನಾವಿಕರು ಮತ್ತು ಮೀನುಗಾರರಿಗೆ ಪಥದರ್ಶನ ಮಾಡುತ್ತಿದ್ದ ಲೈಟ್‌ಹೌಸ್‌ಗಳನ್ನು ಉಳಿಸಿ ಪ್ರವಾಸಿಗರ ಆಕರ್ಷಣೀಯ ಸ್ಥಳವನ್ನಾಗಿ ಪರಿವರ್ತಿಸುವ ಚಿಂತನೆಯೊಂದಿಗೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಜೋಡಿಸಲಾಗಿದೆ. ಪ್ರಧಾನಿ ಮೋದಿ ಅವರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಗೌರವ ಹೆಚ್ಚಿಸಿದೆ ಎಂದರು.
Advertisement
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಎಡಿಸಿ ಮಮತಾ ದೇವಿ, ಜಿ.ಪಂ. ಸಿಇಒ ಪ್ರತೀಕ್ ಬಾಯಲ್, ಕಾಪು ತಹಶೀಲ್ದಾರ್ ಪ್ರತಿಭಾ ಆರ್., ಪುರಸಭೆ ಸದಸ್ಯ ನಿತಿನ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಮೊದಲಾದವರಿದ್ದರು.ದೀಪಸ್ತಂಭಗಳು ಮತ್ತು ದೀಪನೌಕೆಗಳ ನಿರ್ದೇಶನಾಲಯದ ನಿರ್ದೇಶಕ ರಾಜೇಶ್ ದಾಸ್ ಸ್ವಾಗತಿಸಿದರು. ಉಪ ನಿರ್ದೇಶಕ ಮಹೇಶ್ ಪ್ರಸಾದ್ ನಿಮ್ಹಾರೆ ವಂದಿಸಿದರು. ಅನಿರುದ್ಧ್ ಉಡುಪಿ ನಿರ್ವಹಿಸಿದರು.
ಉಡುಪಿ ರೈಲು ನಿಲ್ದಾಣ ಶೀಘ್ರ ಮೇಲ್ದರ್ಜೆಗೆ10 ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ 40 ಸಾವಿರ ಕಿ.ಮೀ. ಉದ್ದದ ಕೊಂಕಣ ರೈಲ್ವೇ ವಿದ್ಯುದೀಕರಣ ನಡೆಸಲಾಗಿದೆ. ಪ್ರಧಾನ ಮಂತ್ರಿ ಅಮೃತ ರೈಲು ನಿಲ್ದಾಣ ಯೋಜನೆಯಡಿ ಚಿಕ್ಕಮಗಳೂರು ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಉಡುಪಿ ರೈಲು ನಿಲ್ದಾಣವು ಎರಡನೇ ಹಂತದದ ಅಮೃತ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಗಾಗಿ ಆಯ್ಕೆಯಾಗಿದೆ. ಈ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸಿಕೊಡಲಾಗಿದೆ ಎಂದು ಹೇಳಿದರು.