Advertisement

343.74 ಕೋಟಿ ವೆಚ್ಚದಲ್ಲಿ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ: ನಳಿನ್ ಕುಮಾರ್ ಕಟೀಲ್

05:52 PM Feb 05, 2024 | Team Udayavani |

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಪತ್ರ ಬರೆದು ತಿಳಿಸಿದ್ದಾರೆ.

Advertisement

2023-24ನೇ ಸಾಲಿನ ವಾರ್ಷಿಕ ಯೋಜನೆಯಡಿಯಲ್ಲಿ ಸುಮಾರು ರೂ. 343.74 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯು ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಲಿದ್ದು, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ. ಜಿಲ್ಲೆಗೆ ಮಹತ್ವದ ಹೆದ್ದಾರಿ ಯೋಜನೆಗಳನ್ನು ನೀಡಿರುವಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next