Advertisement
ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಟಿಡಿಆರ್ ಬಳಕೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಯಾಂತ್ರೀಕೃತ ದೋಣಿಗಳಿಗೆ ಇದುವರೆಗೆ ವಾರ್ಷಿಕ ಮಿತಿ 1.50 ಲಕ್ಷ ಕಿಲೋ ಲೀಟರ್ ಕರ ರಹಿತ ಡೀಸಲ್ ಅನ್ನು ವಿತರಿಸಲಾಗುತ್ತಿತ್ತು, ಪ್ರಸ್ತುತ ಸಾಲಿನಿಂದ ಯಾಂತ್ರೀಕೃತ ದೋಣಿಗಳಿಗೆ ವಾರ್ಷಿಕ 1.50 ಲಕ್ಷ ಕಿಲೋ ಲೀಟರ್‌ನಿಂದ 2 ಲಕ್ಷ ಕಿಲೋ ಲೀಟರ್ ವರೆಗೆ ಹೆಚ್ಚಿಸಿ ಕರ ಡೀಸಲ್ ಅನ್ನು ವಿತರಿಸಿದ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸರಬರಾಜು ಮಾಡಲು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕೈಗಾರಿಕ ಸೀಮೆಎಣ್ಣೆಯನ್ನು ಖರೀದಿಸುವ ನಾಡದೋಣಿ ಮಾಲಕರಿಗೆ ಪ್ರತಿ ಲೀಟರ್‌ಗೆ 35 ರೂ.ರಂತೆ ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು. ವಿವಿಧ ಕಾಮಗಾರಿಗಳಿಗೆ ಮೀನುಗಾರಿಕೆ ಬಂದರಿನ ವಾರ್ಫ್ ಮತ್ತು ಅಳಿವೆ ಬಾಗಿಲಿನಲ್ಲಿ ಹೂಳೆತ್ತುವ ಕಾಮಗಾರಿ, ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳಿಗೆ ಜಟ್ಟಿ ನಿರ್ಮಾಣ ಮಾಡಲು 6.50 ಕೋಟಿ ರೂ. ಅನುದಾನದಲ್ಲಿ ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಎನ್‌ಸಿಆರ್‌ಎಂಪಿ ಯೋಜನೆಯಡಿ ಅನುದಾನ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಮೀನುಗಾರಿಕೆ ಇಲಾಖೆಯಿಂದ ಮೀನು ಸಂತತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೇತ್ರಾವತಿ ನದಿ ಹಿನ್ನೀರಿನಲ್ಲಿ 6,129 ಫಲ್ಗುಣಿ ನದಿ ಹಿನ್ನೀರಿನಲ್ಲಿ 5000 ಹಾಗೂ ಶಾಂಭವಿ ನದಿ ಹಿನ್ನೀರಿನಲ್ಲಿ 5000 ಸೀ ಬಾಸ್ ತಳಿಯ ಮೀನುಮರಿಗಳನ್ನು ಬಿತ್ತನೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಯಿತು.
Related Articles
Advertisement