Advertisement

ಸಾಲ ಮನ್ನಾದಿಂದ ಅಭಿವೃದ್ಧಿ ಕುಂಠಿತವಿಲ್ಲ

06:00 AM Sep 26, 2018 | Team Udayavani |

ಬೆಂಗಳೂರು: ರೈತರ ಸಾಲ ಮನ್ನಾ ಮಾಡಿರುವುದರಿಂದ ರಾಜ್ಯದ ಯಾವುದೇ ಅಭಿವೃದ್ಧಿ ಕೆಲಸಗಳು ಕುಂಠಿತ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸಾಲ ಮನ್ನಾ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಷ್ಟ್ರೀಕೃತ ಹಾಗೂ
ಸಹಕಾರ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿರುವ ಕುರಿತು ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಸಾಲ ಮನ್ನಾ ನಿಯಮಗಳನ್ನು ರೂಪಿಸಲು ಎರಡು ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.

Advertisement

ಪ್ರತಿಯೊಂದು ಕುಟುಂಬದಲ್ಲಿ ಎಷ್ಟು ರೈತರು ಸಾಲ ಪಡೆದಿದ್ದಾರೆಂಬ ಬಗ್ಗೆ ರೈತರಿಂದಲೇ ಮಾಹಿತಿ ಪಡೆಯಲು ಸೂಚನೆ ನೀಡಲಾಗಿತ್ತು. ಯಾವ ಯಾವ ಬ್ಯಾಂಕ್‌ಗಳಲ್ಲಿ ರೈತರು ಸಾಲ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ನೀಡುವಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗಿತ್ತು. ತಕ್ಷಣ ಮಾಹಿತಿ ನೀಡುವ ಬ್ಯಾಂಕ್‌ಗಳಿಗೆ ಸಾಲ ಮರುಪಾವತಿ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್‌ 1 ರಿಂದ ಬ್ಯಾಂಕ್‌ ಗಳಿಗೆ ಸಾಲ ಮರು ಪಾವತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಎರಡು ಲಕ್ಷಗಳ ವರೆಗೆ ಸಾಲ ಪಡೆದವರು ಹಾಗೂ ಸಾಲ ಮರು ಪಾವತಿ ಮಾಡಿರುವ ರೈತರಿಗೆ 25 ಸಾವಿರ ರೂ. ಪ್ರೋತ್ಸಾಹಧನ ನೀಡುವುದನ್ನು ಆರಂಭಿಸುತ್ತೇವೆ ಎಂದು ಹೇಳಿದರು.

ಬ್ಯಾಂಕ್‌ಗಳಿಗೆ ಎಚ್ಚರಿಕೆ: ಸರ್ಕಾರ ಸಾಲ ಮನ್ನಾ ಮಾಡಿದ್ದರೂ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡಿ ಕಿರುಕುಳ ಕೊಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸಾಲ ಮರು ಪಾವತಿಸಲು ಸಮಯ ಕೇಳಿದ್ದರೂ ನೋಟಿಸ್‌ ನೀಡಲಾಗುತ್ತಿದ್ದು, ಬ್ಯಾಂಕ್‌ಗಳು ರೈತರಿಗೆ ಪದೇ ಪದೆ ನೋಟಿಸ್‌ ನೀಡಿದರೆ, ಅಂತಹ ಬ್ಯಾಂಕ್‌ಗಳ ವಿರುದಟಛಿ ರೈತರಿಂದ ದೂರು ದಾಖಲಿಸಿಕೊಂಡು ಎಫ್ಐಆರ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next