Advertisement

ಗಜ್ಜರಹಳ್ಳಿ ಅಭಿವೃದ್ಧಿಗೆ 1.60 ಕೋಟಿ ರೂ.

05:33 PM Oct 17, 2022 | Team Udayavani |

ಶಿರಾ: ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಕಾಂಕ್ರೀಟ್‌ ರಸ್ತೆಯನ್ನೇ ಕಾಣದ ಗಜ್ಜರಹಳ್ಳಿ ಗ್ರಾಮಕ್ಕೆ ಭೇಟಿ ನಿಡಿದ್ದ ಸಂದರ್ಭದಲ್ಲಿ ಗ್ರಾಮದ ಅಭಿವೃದ್ಧಿ ಉದ್ದೇಶದಿಂದ ಗ್ರಾಮವನ್ನು ದತ್ತು ಪಡೆಯುತ್ತೇನೆಂದು ವಾಗ್ಧಾನ ನೀಡಿದ್ದೆ. ಅದರಂತೆ ಸುಮಾರು 1.60 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

Advertisement

ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಜ್ಜಿಗರಹಳ್ಳಿಯಲ್ಲಿ 1.60 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆಗಳನ್ನೇ ಕಾಣದೆ, ಅಭಿವೃದ್ಧಿ ಮರೀಚಿಕೆಯಾಗಿದ್ದ ಗಜ್ಜಿಗರಹಳ್ಳಿಗೆ ನಾನು ಶಾಸಕನಾದ ನಂತರ ಭೇಟಿ ನೀಡಿ ಈ ಕುಗ್ರಾಮವನ್ನು ಅಭಿವೃದ್ಧಿಪಡಿಸಬೇಕೆಂದು ಮನಗಂಡು ಅಂದೇ ಗ್ರಾಮ ದತ್ತು ಪಡೆದು ಮಾದರಿ ಗ್ರಾಮವನ್ನಾಗಿಸುವ ಭರವಸೆ ನೀಡಿದ್ದೆನು.

ಅದರಂತೆ ವಿವಿಧ ಅಭಿವೃದ್ಧಿ ಯೋಜನೆಗಳಡಿ ಸುಮಾರು 1.60 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಮುಖ್ಯ ರಸ್ತೆ ನಿರ್ಮಾಣ ಹಾಗೂ ಗ್ರಾಮದ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದೇನೆ. ಕೊಟ್ಟ ಮಾತಿನಂತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು. ತಾವರೆಕೆರೆ ಗ್ರಾಪಂ ಅಧ್ಯಕ್ಷೆ ಅನಿತಾ ಈರಣ್ಣ, ಉಪಾಧ್ಯಕ್ಷ ಶಿವುಸ್ನೇಹಪ್ರಿಯ, ಸದಸ್ಯ ನಿತ್ಯಾನಂದ, ರಾಜು, ಬಿಜೆಪಿ ಮುಖಂಡರಾದ ಶಿವಕುಮಾರ್‌, ಶ್ರೀನಿವಾಸ್‌, ದೇವರಾಜ್‌, ಪಾಂಡುರಂಗಪ್ಪ, ಯೋಗೇಶ್‌, ಚನ್ನವೀರಪ್ಪ ಸೇರಿದಂತೆ ಹಲವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next