Advertisement

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

12:05 AM Dec 23, 2024 | Team Udayavani |

ಬೆಂಗಳೂರು: ಕರ್ನಾಟಕವನ್ನು ಅಭಿವೃದ್ಧಿ ಶೂನ್ಯವಾಗಿಸಿರುವ ಕಾಂಗ್ರೆಸ್‌ ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

Advertisement

ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಅವರು ಕನ್ನಡ ಶಾಲೆಗಳು ಶಿಕ್ಷಕರು, ಸೌಕರ್ಯಗಳಿಲ್ಲದೆ ಮುಚ್ಚುವ ಸ್ಥಿತಿ ತಲುಪಿವೆ. ಈ ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಕನ್ನಡತನ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಈ ಭಾಷಣದ ವೀಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next