Advertisement
ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕೊತ್ತತ್ತಿ ಗ್ರಾಮದ ಒಳಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದೇವೆ. ಗುಣಮಟ್ಟದ ರಸ್ತೆಗಳು ನಿರ್ಮಾಣಗೊಂಡಿವೆ. ಬಹಳಷ್ಟು ವರ್ಷಗಳ ಕಾಲ ಅಧಿಕಾರ ನಡೆಸಿದವರು, ರಸ್ತೆಗಳ ಅಭಿವೃದ್ಧಿಗೆ ಕಾಳಜಿ ವಹಿಸಿರಲಿಲ್ಲ. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದರು.
Related Articles
Advertisement
ಸರ್ಕಾರದಿಂದ ದುಂದುವೆಚ್ಚ : ಜಿಲ್ಲಾಡಳಿತದಿಂದಲೇ ದುಂದುವೆಚ್ಚವಾಗಿದ್ದು, ಕೆಆರ್‌ಎಸ್ ಬಾಗಿನ ಕಾರ್ಯಕ್ರಮ ಆಯೋಜನೆ ಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡಿದ್ದು, ನಾಚಿಕೆಗೇಡಿನ ವಿಚಾರ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, 2 ಲಕ್ಷ ರೂ.ವೆಚ್ಚದಲ್ಲಿ ಮುಗಿಯಬೇಕಾದ ಕಾರ್ಯಕ್ರಮಕ್ಕೆ 13 ಲಕ್ಷ ರೂ. ಖರ್ಚು ಮಾಡಲಾಗಿದೆ. ಬಾಳೆಕಂದು, ಮಾವಿನ ಸೊಪ್ಪು, ಶಾಮಿಯಾನ, ವಿಡಿಯೋ, ಪೋಟೋಗೆ ಅಷ್ಟು ಹಣ ಖರ್ಚಾಗುವುದಿಲ್ಲ. ಹಿಂದೆ ನಾವು ಬಾಗಿನ ಕಾರ್ಯಕ್ರಮ ನಡೆಸಿದ್ದೇವೆ. ದುಂದುವೆಚ್ಚಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಆರೋಪಿಸಿದರು. ಬಾಗಿನ ಕಾರ್ಯಕ್ರಮ ಆಯೋಜನೆಗೆ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಕ್ಷೇತ್ರದ ಶಾಸಕರ ಮಾತಿಗೆ ಬೆಲೆ ಇಲ್ಲವಾಗಿದೆ. ಡೀಸಿ, ಪೊಲೀಸ್ ಅಧೀಕ್ಷಕರು ಮತ್ತು ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದರು.