Advertisement

ರಾಜ್ಯದಲ್ಲಿ ಗ್ರಂಥಾಲಯಗಳ ಅಭಿವೃದ್ಧಿ

03:46 PM Apr 24, 2018 | |

ಬೆಂಗಳೂರು: ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಗ್ರಂಥಾಲಯ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂದಿದ್ದು, ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಗ್ರಂಥಾಲಯ ಸ್ಥಾಪಿಸುವ ಮೂಲಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜ್ಞಾನಪೀಠ ಪುರಸ್ಕೃತ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ್‌ ಕಂಬಾರ ಹೇಳಿದ್ದಾರೆ.

Advertisement

ಹಂಪಿ ನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಬೆಂಗಳೂರು ಸಾರ್ವಜನಿಕ ಗ್ರಂಥಾಲಯ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು. 25 ಕೋಟಿ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಲ್ಲಿ ಕೇವಲ 68 ಸಾರ್ವಜನಿಕ ಗ್ರಂಥಾಲಯಗಳಿದ್ದರೆ, 6 ಕೋಟಿಗೂ ಅಧಿಕ ಜನಸಂಖ್ಯೆ ಇರುವ ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಗ್ರಂಥಾಲಯಗಳಿರುವುದು ಹೆಮ್ಮೆ ವಿಚಾರ ಎಂದರು.

ಸಾಹಿತಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪುಸ್ತಕಗಳು ಪ್ರಮುಖ ಪಾತ್ರವಹಿಸುತ್ತವೆ. ನಾನು ಬಸವರಾಜು ಕಟ್ಟಿಮನಿ ಅವರು ಬರೆದ ಸ್ವಾತಂತ್ರ್ಯ ದೇಣಿಗೆ ಪುಸ್ತಕದಿಂದ ಪ್ರೇರಿತಗೊಂಡು ಓದುವ ಹವ್ಯಾಸ ಬೆಳೆಸಿಕೊಂಡೆ. ನಂತರ ಕುವೆಂಪು ಸೇರಿದಂತೆ ಅನೇಕ ಕವಿಗಳ ಪುಸ್ತಕ ಓದಲು ಆರಂಭಿಸಿದೆ ಎಂದು ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

ನಿವೃತ್ತ ಐಪಿಎಸ್‌ ಅಧಿಕಾರಿ ಡಿ.ಎನ್‌.ಮುನಿಕೃಷ್ಣ, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧಕ್ಷರ ಡಾ.ಪಿ.ವಿ.ಕೊಣ್ಣೂರ್‌, ಸಾಹಿತಿ ಶೂದ್ರ ಶ್ರೀನಿವಾಸ್‌, ಗ್ರಂಥಾಲಯ ಇಲಾಖೆ ಮಾಜಿ ವಿಶ್ರಾಂತ ನಿರ್ದೇಶಕ ಟಿ.ಮಲ್ಲೇಶಪ್ಪ, ಕೆ.ಜಿ.ವೆಂಕಟೇಶ್‌ ಹಾಗೂ ಡಾ.ಪಿ.ವೈ.ರಾಜೇಂದ್ರಕುಮಾರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next