Advertisement
ನಗರದಲ್ಲಿ ಅನೇಕ ಸಮಸ್ಯೆಗಳಿವೆ. ಪ್ರತಿನಿತ್ಯನಗರ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರದ ಬಹುತೇಕ ರಸ್ತೆಗಳು ಅದ್ವಾನಗೊಂಡಿವೆ. ಯುಜಿಡಿ ಆಧುನೀಕರಣ,ಸುಸಜ್ಜಿತ ಮಾರುಕಟ್ಟೆ ನಿರ್ಮಾಣ, ಮಹಾವೀರವೃತ್ತದ ರೈಲ್ವೆ ಮೇಲ್ಸುತುವೆ ನಿರ್ಮಾಣ,ಉದ್ಯಾನಗಳ ಅಭಿವೃದ್ಧಿ, ಕುಡಿಯುವ ನೀರುಸರಬರಾಜಿಗೆ ಪೈಪ್‌ಲೈನ್ ಅಳವಡಿಕೆ, ಡ್ರೆçನೇಜ್, ವಿದ್ಯುತ್ ದೀಪಗಳು ಸೇರಿದಂತೆ ವಿವಿಧ ಅಭಿವೃದ್ಧಿಗೆಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.
Related Articles
Advertisement
ಅಮೃತ್ ಯೋಜನೆ ಪೂರ್ಣಕ್ಕೆ 85 ಕೋಟಿ ರೂ.: ನಗರದಲ್ಲಿ ಪ್ರಗತಿಯಲ್ಲಿರುವ ಅಮೃತ್ ಯೋಜನೆ ಅರ್ಧಕ್ಕೆ ನಿಂತಿದ್ದು, ಪೂರ್ಣಗೊಳಿಸಲು ಇನ್ನೂ 85 ಕೋಟಿ ರೂ. ಅಗತ್ಯವಿದೆ. ಈಗಾಗಲೇ 12 ವಾರ್ಡ್ ಗಳಿಗೆ ಮಾತ್ರ 24 ಗಂಟೆಗಳ ಕುಡಿಯುವ ನೀರುಸರಬರಾಜು ಮಾಡು ವ ಕಾಮಗಾರಿ ಮುಗಿದಿದೆ. ಉಳಿದ 19 ವಾರ್ಡ್‌ಗಳಿಗೆ 24 ಗಂಟೆಗಳ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪೂರ್ಣಗೊಂಡಿಲ್ಲ. ಶೀಘ್ರ ಕಾಮಗಾರಿ ಮುಗಿಸಲು ಅನುದಾನ ಬಿಡುಗಡೆಗೆ ಕೋರಲಾಗಿದೆ.
ಮಹಾವೀರ ವೃತ್ತದ ಕಾಮಗಾರಿಗೆ ಅನುದಾನ: ಮಳೆಬಂದರೆ ಬೆಂಗಳೂರು-ಮೈಸೂರು ಹೆದ್ದಾರಿ ನಗರಸಭೆಕಚೇರಿ ಪಕ್ಕದಲ್ಲಿಯೇ ಇರುವ ಮಹಾವೀರ ವೃತ್ತದಲ್ಲಿನೀರು ನಿಂತು ಕೆರೆಯಂತಾಗುತ್ತದೆ. ಇದರಿಂದ ಸಾಕಷ್ಟು ತೊಂದರೆಗಳಾಗುತ್ತಿವೆ. ಇದು ಪ್ರತಿ ವರ್ಷವೂಮಳೆಗಾಲ ಸಂದರ್ಭದಲ್ಲಿ ಸಮಸ್ಯೆ ತಲೆದೋರುತ್ತದೆ. ಆದ್ದರಿಂದ ಮಳೆ ಬಂದಾಗ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕಾಮಗಾರಿ ನಡೆಸಲು ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮಾರುಕಟ್ಟೆ ನಿರ್ಮಾಣಕ್ಕೆ 48 ಕೋಟಿ ರೂ. ಮಂಡ್ಯದ ಹೃದಯಭಾಗದಲ್ಲಿರುವ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಯೋಜನೆ ಬಹಳವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಕ್ಕಾಗಿ ಸುಮಾರು 48 ಕೋಟಿ ರೂ. ಅನುದಾನ ಅಗತ್ಯವಾಗಿದೆ. ಈಗಾಗಲೇ ಮಾರುಕಟ್ಟೆ ನಿರ್ಮಾಣಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ನಡೆದಿದೆ. ಆದರೆ ಅನುದಾನದ ಕೊರತೆಯಿಂದ ವಿಳಂಬವಾಗುತ್ತಲೇ ಬಂದಿದೆ. ವರ್ಷದಿಂದ ವರ್ಷಕ್ಕೆ ಅನುದಾನದ ಅವಶ್ಯಕತೆ ಹೆಚ್ಚುತ್ತಲೇ ಇದೆ. ಆದ್ದರಿಂದ ಬಜೆಟ್‌ನಲ್ಲಿ ಹಣ ನೀಡುವ ಬಗ್ಗೆ ನಿರೀಕ್ಷಿಸಲಾಗಿದೆ.
50 ಕೋಟಿ ರೂ. ಬಿಡುಗಡೆಗೆ ಮನವಿ :
ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡ್ಯ ನಗರದ ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಮಾಡಲಾಗಿದ್ದ 50 ಕೋಟಿ ರೂ. ಅನುದಾನವನ್ನುಬಿಜೆಪಿ ಸರ್ಕಾರ ವಾಪಸ್ ಪಡೆದಿತ್ತು. ಅದನ್ನುಮತ್ತೆ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವನೆಯಲ್ಲಿ ಕೋರಲಾಗಿದೆ.
ಮಂಡ್ಯ ನಗರದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಅನುದಾನ ಘೋಷಣೆಗೆ 660 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಚರಂಡಿ,ಯುಜಿಡಿ ಆಧುನೀಕರಣ, ರಸ್ತೆಗಳ ಅಭಿವೃದ್ಧಿ, ಅಮೃತ್ ಯೋಜನೆ ಕಾಮಗಾರಿ ಪೂರ್ಣಗೊಳಿಸುವ, ಉದ್ಯಾನಗಳ ಅಭಿವೃದ್ಧಿ ಸೇರಿದಂತೆ ಇಡೀ ನಗರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಪ್ರಸ್ತಾವನೆ ಸಲ್ಲಿಸಲಾಗಿದೆ. –ಎಚ್.ಎಸ್.ಮಂಜು, ಅಧ್ಯಕ್ಷರು, ನಗರಸಭೆ, ಮಂಡ್ಯ
– ಎಚ್.ಶಿವರಾಜು