Advertisement

ಮೋದಿ ಸರ್ಕಾರದಿಂದ ದೇಶದ ಅಭಿವೃದ್ಧಿ; ಈರಣ್ಣ ಕಡಾಡಿ

06:10 PM Jun 01, 2022 | Team Udayavani |

ಮೂಡಲಗಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಗತಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು 15 ದಿನ ಪ್ರತಿದಿನ 5 ಗಂಟೆಯಂತೆ ಒಟ್ಟು 75 ಗಂಟೆಗಳ ಕಾಲ ಸರ್ಕಾರದ ಯೋಜನೆ ಫಲಾನುಭವಿಗಳೊಂದಿಗೆ ಸಂಪರ್ಕ ಸಾಧಿಸಲು ಶ್ರಮಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

Advertisement

ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯದಲ್ಲಿ ಮಂಗಳವಾರ ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆಸಿದ ನೇರ ಸಂವಾದ ಕಾರ್ಯಕ್ರಮ ರೈತರೊಂದಿಗೆ ವೀಕ್ಷಿಸಿ, ನಂತರ ಅವರು ಮಾತನಾಡಿದರು.

30 ವರ್ಷಗಳ ನಂತರ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ಅ ಧಿಕಾರಕ್ಕೆ ಬಂದ ಮೇಲೆ ದೇಶದ ಅಭಿವೃದ್ಧಿ ಗತಿ ಬದಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಆರ್ಥಿಕ ಪರಿಸ್ಥಿತಿ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕೋವಿಡ್‌ ನಂತಹ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿಯೂ ಜನರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಮತ್ತು ಆಹಾರ ಎಲ್ಲ ವ್ಯವಸ್ಥೆ ಸಮರ್ಪಕವಾಗಿ ಮಾಡುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

8 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ರೈತ ಪರವಾಗಿ ವಿಶೇಷ ಕಳಕಳಿ ಹೊಂದಿದ್ದು, ನೂರಾರು ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ  ಯೋಜನೆಯಡಿ ಇಂದು ದೇಶದ 10 ಕೋಟಿಗೂ ಅಧಿಕ ರೈತ ಬಂಧುಗಳಿಗೆ 21 ಸಾವಿರ ಕೋಟಿ ರೂ. ರೈತರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದರು.

ಈ ವೇಳೆ ಬಸವರಾಜ ಕಡಾಡಿ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ, ಪದಾಧಿ ಕಾರಿಗಳಾದ ಶ್ರೀಕಾಂತ ಕೌಜಲಗಿ, ಸುರೇಶ ಮಠಪತಿ, ಶ್ರೀಶೈಲ ಪೂಜೇರಿ, ಅಡಿವೆಪ್ಪ ಕುರಬೇಟ, ದುಂಡಪ್ಪ ನಿಂಗನ್ನವರ, ಭೀಮಶಿ ಬಂಗಾರಿ, ಅಶೋಕ ಶಿವಾಪೂರ, ಬಸವರಾಜ ಗಾಡವಿ, ಮಂಗಲಾ ಕೌಜಲಗಿ, ಕಮಲಾ ಬಡಗಾಂವಿ, ಶ್ರೀಶೈಲ ತುಪ್ಪದ, ಶಿವಗೊಂಡ ವ್ಯಾಪಾರಿ, ಸಹದೇವ ಹೆಬ್ಟಾಳ, ಪರಪ್ಪ ಮಳವಾಡ, ಈರಣ್ಣ ಮುನ್ನೋಳಿಮಠ, ಶಿವಪ್ಪ ಬಿ. ಪಾಟೀಲ ಸೇರಿದಂತೆ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next