Advertisement
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರದ 4ನೇ ವಾರ್ಷಿಕೋತ್ಸವದ ಅಂಗವಾಗಿ ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕದಡಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.
Related Articles
Advertisement
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಮಾತನಾಡಿ, ಚೀನಾದ ಕೋವಿಡ್ ಕೇರ್ ಸೆಂಟರ್ ನಲ್ಲಿ ಆಹಾರಕ್ಕಾಗಿ ಪರಿತಪಿಸುತ್ತಿರುವುದನ್ನು ವಿವಿಧ ಮಾಧ್ಯಮದ ಮೂಲಕ ನೋಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಆಹಾರದ ಸಮಸ್ಯೆಯಾಗದಂತೆ ನೋಡಿವೆ. ಉಚಿತವಾಗಿ ಪಡಿತರ ಸಹ ವಿತರಿಸಲಾಗುತ್ತಿದೆ. ಉಚಿತ ಆರೋಗ್ಯ ಸೇವೆ ನೀಡುವ ಎಬಿಆರ್‌ಕೆ ಕಾರ್ಡ್ ಗಳನ್ನು ಗ್ರಾಮ-1 ಕೇಂದ್ರಗಳಲ್ಲಿ ಸಹ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ಜಯಶ್ರೀ ಎಮ್ಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ, ಜಿಲ್ಲಾ ಆಯುಷ್ ಅಧಿ ಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿಲ್ಲಾ ಸರ್ವೇಕ್ಷಣಾ ಕಾರಿ ಡಾ|ವಿಜಯ ಕಂಠಿ, ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ|ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಬಿ.ಜಿ. ಹುಬ್ಬಳ್ಳಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಎಸ್.ಸಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ವಿವಿಧ ಆರೋಗ್ಯ ಸೇವೆ ಮಳಿಗೆ ಉದ್ಘಾಟನೆ ಕಾರ್ಯಕ್ರಮದ ಪೂರ್ವದಲ್ಲಿ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸುವ ಕ್ಷಯರೋಗ ತಪಾಸಣೆ, ಆಹಾರ ಕಲಬರಕೆ ಮಾಹಿತಿ ಕೇಂದ್ರ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಆರೋಗ್ಯ ಶಿಕ್ಷಣ, ಬಿಪಿ-ಶುಗರ್ ತಪಾಸಣೆ, ಆಯುಷ ಸೇವಾ ಕೇಂದ್ರ, ರಾಷ್ಟ್ರೀಯ ತಂಬಾಕು ನಿಯಂತ್ರಣ, ಐಡಿಎಸ್‌ಪಿ ಕೇಂದ್ರ ಹಾಗೂ ಔಷಧ ವಿತರಣೆ ಮಳಿಗೆಗಳನ್ನು ಸಂಸದ ಪಿ.ಸಿ.ಗದ್ದಿಗೌಡರ ಮತ್ತು ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು.