ಬೆಳ್ತಂಗಡಿ: ಜನಸಂಖ್ಯಾ ನಿಯಂತ್ರಣ ಮತ್ತು ಕುಟುಂಬದ ಅಭಿವೃದ್ಧಿಯಲ್ಲಿ ಯುವ ಸಮುದಾಯದ ಜವಾಬ್ದಾರಿ ಮಹತ್ತರವಾದುದು. ಜನಸಮುದಾಯವು ವೈಯಕ್ತಿಕ ಅಭಿವೃದ್ಧಿಯೊಂದಿಗೆ ದೇಶದ ಸಂಪತ್ತಾಗಿ ಮೂಡಿಬಂದಾಗ ದೇಶದ ಪ್ರಗತಿ ಸಾಧ್ಯ ಎಂದು ಉಜಿರೆ ಎಸ್‌ಡಿಎಂ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕ ಸ್ಮಿತೇಶ್ ಬಾರ್ಯ ಹೇಳಿದರು.
ಅವರು ಮಂಗಳವಾರ ಬೆಳ್ತಂಗಡಿ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನದ ಜಾಗƒತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಂಖ್ಯೆಯ ಹೆಚ್ಚಳ ಮೂಲಸೌಲಭ್ಯಗಳ ಕೊರತೆಗೆ ಕಾರಣವಾಗುತ್ತಿದೆ. ಇದು ದೇಶದ ಪ್ರಗತಿಗೆ ಪೂರಕವಲ್ಲ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಡಾ| ಮೋಹನ ಗೌಡ ಸ್ವಾಗತಿಸಿ, ಉಪನ್ಯಾಸಕ ಗಣೇಶ್ ಬಿ. ಶಿರ್ಲಾಲು ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.