Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಲ್ಲಿದ್ದಾಗ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಧ್ಯವಾಗಿವೆ. ಆದರೆ ಬಿಜೆಪಿ ಸರಕಾರದಿಂದ ನೆರೆ ಪರಿಹಾರ ನೀಡಲೇ ಸಾಧ್ಯವಾಗುತ್ತಿಲ್ಲ ಎಂದರು.
ಈ ಹಿಂದಿನ ಅವಧಿಯ ಕಾಂಗ್ರೆಸ್ ಆಡಳಿತದಲ್ಲಿ ಮಹಾನಗರ ಪಾಲಿಕೆಗೆ ಸಂಬಂಧಿಸಿ ತುಂಬೆ ಅಣೆಕಟ್ಟು ರಚನೆ, ಒಳಚರಂಡಿ ಕಾಮಗಾರಿ, ನಗರದ ಪ್ರಮುಖ ರಸ್ತೆಗಳ ಕಾಂಕ್ರೀಟೀಕರಣ, ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ, ಸುರತ್ಕಲ್‌ನಲ್ಲಿ ಮಾದರಿ ಮಾರುಕಟ್ಟೆ ನಿರ್ಮಾಣ, ಲೇಡಿಗೋಶನ್ ಹಾಗೂ ವೆನಾಕ್ ಆಸ್ಪತ್ರೆ ಮೇಲ್ದರ್ಜೆಗೆ, ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವಾರು ಯೋಜನೆಗಳು ಕಾಂಗ್ರೆಸ್ ಆಡಳಿತದಲ್ಲಿ ಆಗಿವೆ. ಜನತೆ ಈ ಅಭಿವೃದ್ಧಿ ಕಾರ್ಯಗಳನ್ನು ತುಲನೆ ಮಾಡಿಕೊಂಡು ಮತ್ತೂಮ್ಮೆ ಕಾಂಗ್ರೆಸ್‌ಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಹಿಂದಿನ ಮನಪಾ ಆಡಳಿತ ಬಗ್ಗೆ ತಪ್ಪು ಹುಡುಕಿ ಆರೋಪ ಮಾಡುವ ಕೆಲಸ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಪ್ರಜ್ಞಾವಂತ ಮತದಾರರು ಯಾವ ಸರಕಾರದಲ್ಲಿ ಎಷ್ಟು ಕೆಲಸ ಆಗಿದೆ ಎಂಬುದನ್ನು ತಿಳಿದು ಮತದಾನ ಮಾಡ ಬೇಕು ಎಂದರು.
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಆಗದಿರಲು ಬಿಜೆಪಿ ಕಾರಣ ಎಂದು ಆರೋಪಿಸಿದ ರಮಾನಾಥ ರೈ, ಬಿಜೆಪಿ ಆಡಳಿತಕ್ಕೆ ಬಂದು ಮೂರು ತಿಂಗಳು ಕಳೆದರೂ ಯಾಕೆ ಆಯ್ಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.
Related Articles
ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಇಬ್ಬರು ಚುನಾಯಿತ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಈಗ ಬಿಜೆಪಿ ಆಡಳಿತದಲ್ಲಿ ಜಿಲ್ಲೆಯ 7 ಮಂದಿ ಚುನಾಯಿತ ಶಾಸಕರಿದ್ದರೂ ಒಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ ಎಂದು ಟೀಕಿಸಿದರು.
Advertisement
ಅಭ್ಯರ್ಥಿ ಪಟ್ಟಿ ಶೀಘ್ರ ಬಿಡುಗಡೆಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಪಟ್ಟಿ ಸಿದ್ಧವಾಗುತ್ತಿದೆ. ಸಾಕಷ್ಟು ಅರ್ಜಿಗಳು ಬಂದಿದ್ದು, ಸಾಮಾಜಿಕ ಸಮತೋಲನ ದೊಂದಿಗೆ ಎಲ್ಲರಿಗೂ ಆದ್ಯತೆ ನೀಡಲಾಗುವುದು. ಹೊಸಬರಿಗೆ ಅವಕಾಶದ ಜತೆಗೆ ಉತ್ತಮ ಕೆಲಸ ಮಾಡಿದ ಹಿರಿಯರನ್ನು ಪರಿಗಣಿಸಲಾಗು ವುದು. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಪಕ್ಷ ದಲ್ಲಿ ಬಹಳಷ್ಟು ಚರ್ಚೆ ಇಲ್ಲ. ಪಟ್ಟಿ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ರೈ ತಿಳಿಸಿದರು.