Advertisement
ಬಳಿಕ ವಿವಿಧ ಪೊಲೀಸ್ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಜಿಲ್ಲೆಯ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ-ಕರ್ನಾಟಕ ಪ್ರದೇಶ ನಿಜಾಮರ ಆಳ್ವಿಕೆಯಿಂದ ಮುಕ್ತಗೊಂಡು 74 ವರ್ಷ ಕಳೆದಿವೆ. ಇದಕ್ಕಾಗಿ ಹೋರಾಡಿದ ಎಲ್ಲ ಮಹನೀಯರನ್ನು ಎಲ್ಲರೂ ಸ್ಮರಿಸಬೇಕು. 1947, ಆ.15ರಂದು ದೇಶದಲ್ಲಿ ತಿರಂಗ ಧ್ವಜ ಹಾರಾಡಿದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಆ ಸಂಭ್ರಮ ಇರಲಿಲ್ಲ. ಉಕ್ಕಿನ ಮನುಷ್ಯ ಎಂದೇ ಹೆಸರಾದ ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟತನದಿಂದ 1948 ಸೆ.13ರಂದು ಪೊಲೀಸ್ ಕಾರ್ಯಾಚರಣೆ (ಆಪರೇಷನ್ ಪೋಲೋ) ಕೈಗೊಳ್ಳಲಾಯಿತು.
Related Articles
Advertisement
ಜಿಲ್ಲೆಯ ಬಿ.ಆರ್ ಗಣೇಕಲ್ ಏತ ನೀರಾವರಿಗೆ 200 ಕೋಟಿ ರೂ. ಮತ್ತು ರಾಯಚೂರು ತಾಲೂಕಿನ ಲಿಂಕ್ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ 212 ಕೋಟಿ ರೂ. ಕಾಮಗಾರಿಗೆ ಶೀಘ್ರವೇ ಚಾಲನೆ ಸಿಗುವ ನಿರೀಕ್ಷೆ ಇದೆ. ಲೋಕೋಪಯೋಗಿ ಇಲಾಖೆಯಲ್ಲಿ 394 ಕೋಟಿ ರೂ. ಅಂದಾಜು ಮೊತ್ತದಲ್ಲಿ ಜಿಲ್ಲೆಯಲ್ಲಿ 51ವಿವಿಧಕಾಮಗಾರಿಗಳುಮುಗಿದಿವೆ. ರಸ್ತೆ, ಸೇತುವೆ ಮತ್ತು ಕಟ್ಟಡಗಳ ತುರ್ತು ದುರಸ್ತಿಗಾಗಿ 735 ಕೋಟಿ ಮೊತ್ತದಲ್ಲಿ 131 ಕಾಮಗಾರಿ ಕೈಗೊಂಡಿದ್ದು, 74 ಕಾಮಗಾರಿ ಮುಗಿದಿವೆ. ರಿಂಗ್ ರಸ್ತೆಗೆ ರಾಜ್ಯ ಸರ್ಕಾರ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 80 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.
ಇಂತಹ ಹತ್ತು ಹಲವು ಸಾಧನೆಗಳನ್ನು ಮೆಲುಕು ಹಾಕುವುದರ ಜೊತೆಗೆ ಈ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೂ ನಮನ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ನಮ್ಮ ದೇಶ ಚೈತನ್ಯಯುತ ಅಭಿವೃದ್ಧಿಶೀಲ ದೇಶವಾಗಬೇಕಾದರೆ ದೇಶಪ್ರೇಮ ಮೂಡಬೇಕು ಎಂದರು. ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್‌ಪಿ ಪ್ರಕಾಶ್ ನಿಕ್ಕಂ, ಎಡಿಸಿ ಕೆ.ಆರ್.ದುರುಗೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
ಜನಪ್ರತಿನಿಧಿಗಳಿಗಿಲ್ಲ ಉತ್ಸವದ ಉತ್ಸಾಹಎಲ್ಲೆಡೆ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ ಮನೆ ಮಾಡಿದ್ದರೆ ಜಿಲ್ಲೆಯ ಜನಪ್ರತಿನಿಧಿಗಳಿಗೆ, ಮುಖಂಡರಿಗೆ ಮಾತ್ರ ಅದು ಬೇಕಿಲ್ಲವೇನೋ ಎನಿಸಿತು. ಈ ಬಾರಿ ಜಿಲ್ಲಾ ಉಸ್ತುವಾರಿಯನ್ನುಕೊಪ್ಪಳದ ಹಾಲಪ್ಪ ಆಚಾರ್ ಅವರಿಗೆ ನೀಡಿದ್ದು, ಎರಡು ಜಿಲ್ಲೆಯಹೊಣೆಹೊತ್ತ ಅವರು ಜಿಲ್ಲೆಗೆ ಬರಲಿಲ್ಲ. ಸಚಿವರು ಬಂದರೆ ಪುಂಖಾನುಪುಂಖವಾಗಿ ಬರುತ್ತಿದ್ದ ಜನಪ್ರತಿನಿಧಿಗಳು, ರಾಜಕೀಯ ಮುಖಂಡರುಯಾರೊಬ್ಬರು ಸುಳಿಯಲಿಲ್ಲ. ನಗರ ಶಾಸಕ ಡಾ| ಶಿವರಾಜ್ ಪಾಟೀಲ್ ನಗರದಲ್ಲಿಯೇ ಇದ್ದರೂ ಕಾರ್ಯಕ್ರಮಕ್ಕೆ ಬರಲಿಲ್ಲ. ಆ ಮೂಲಕ ಕಲ್ಯಾಣಕರ್ನಾಟಕ ಭಾಗದಕಾಳಜಿ ಎಷ್ಟರ ಮಟ್ಟಿಗಿದೆ ಎಂದು ಗೊತ್ತಾಯಿತು.