ನರಗುಂದ: ಬಾಗಲಕೋಟೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ. ಮುಖ್ಯವಾಗಿ ಐತಿಹಾಸಿಕ ಸ್ಥಳಗಳಾದ ಬಾದಾಮಿ, ಲಕ್ಕುಂಡಿ, ಪಟ್ಟದಕಲ್ಲು, ಐಹೊಳೆ ಪ್ರವಾಸೋದ್ಯಮ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.
ತಾಲೂಕಿನ ಕೊಣ್ಣೂರ ಗ್ರಾಮದ ಸಂತೆ ಬಯಲು ಆವರಣದಲ್ಲಿ ಚುನಾವಣಾ ಪ್ರಚಾರಾರ್ಥ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕ್ಷೇತ್ರದಲ್ಲಿ ಗದ್ದಿಗೌಡರ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದ್ದಾರೆ. ಮಹಿಳೆಯರ ಬಗ್ಗೆ ನನಗೆ ಅಪಾರ ಗೌರವವಿದೆ. ನಾನು ಈ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಅವರು ಅವಲೋಕಿಸಲಿ ಎಂದರು.
ಇಡೀ ವಿಶ್ವದ ನಾಯಕರ ವಿಶ್ವಾಸಗಳಿಸಿದ ಪ್ರಧಾನಿ ಮೋದಿ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ನಿರ್ಮಿಸಿದ್ದಾರೆ.
ಹೀಗಾಗಿ ಇಡೀ ಪ್ರಪಂಚವೇ ಇಂದು ಈ ಚುನಾವಣೆ ಬೆರಗು ಕಣ್ಣಿನಿಂದ ನೋಡುತ್ತಿದೆ. ನನಗೆ ಮತ ಹಾಕುವ ಮೂಲಕ ಮೋದಿ ಕೈ ಬಲಪಡಿಸಬೇಕು ಎಂದು ಮತಯಾಚಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಸಿ. ಪಾಟೀಲ, ಟಿಎಪಿಸಿಎಂಎಸ್ ಅಧ್ಯಕ್ಷ ಅಜ್ಜಪ್ಪ ಹುಡೇದ, ನಿಂಗಪ್ಪ ಸೋಮಾಪುರ, ಶೇಖರಗೌಡ ಸಾಳಿಗೌಡ್ರ, ನೇತಾಜಿಗೌಡ ಕೆಂಪನಗೌಡ್ರ, ಶಂಕರಗೌಡ ಯಲ್ಲಪ್ಪಗೌಡ್ರ, ರಾಮನಗೌಡ ಸಾಳಿಗೌಡ್ರ, ಎನ್.ವಿ. ಮೇಟಿ ಇದ್ದರು.