Advertisement
ಗುರುವಾರ ಕಾಪುವಿಗೆ ಭೇಟಿ ನೀಡಿದ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಕಾಪು ವಿಧಾನಸಭಾ ಕ್ಷೇತ್ರದ ರೈಲ್ವೇ ನಿಲ್ದಾಣಗಳ ಕುಂದು ಕೊರತೆಗಳು, ಇಲ್ಲಿ ಓಡಾಡುವ ರೈಲುಗಳು ಹಾಗೂ ಪಡುಬಿದ್ರಿ (ಬೆಳಪು) ರೈಲು ನಿಲ್ದಾಣದಲ್ಲಿ ಮುಂಬಯಿಗೆ ತೆರಳುವ ಮತ್ಸ ಗಂಧ ಮತ್ತು ಬೆಂಗಳೂರು ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡುವ ಬಗ್ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮನವಿ ನೀಡಿದ್ದಾರೆ. ಅವರ ಮನವಿಯಂತೆ ರೈಲ್ವೇ ಮಂತ್ರಿಯಾಗಿ ಯಾವ ರೀತಿಯಲ್ಲಿ ಕೆಲಸ ಮಾಡಬಹುದು ಎನ್ನುವುದರ ಬಗ್ಗೆ ಯೋಚಿಸುತ್ತೇನೆ. ಸಂಸದರು, ಅಽಕಾರಿಗಳೊಂದಿಗೆ ಚರ್ಚೆ ನಡೆಸಿ, ಇಲ್ಲಿ ಯಾವ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬಹುದು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ರೈಲು ನಿಲ್ದಾಣಕ್ಕೆ ಹೋಗುವ ರಸ್ತೆಗಳು ದುರಸ್ತಿಗೊಳ್ಳದಿರುವ ಬಗ್ಗೆ ಸಚಿವರ ಗಮನ ಸೆಳೆದಾಗ, ಈ ಬಗ್ಗೆ ಸ್ಥಳೀಯ ಸಂಸದರೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಉದಯವಾಣಿ ಲೇಖನದ ಪ್ರತಿ ಹಸ್ತಾಂತರ : ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆ. ೫ರ ಉದಯವಾಣಿ ಸುದಿನದಲ್ಲಿ ಬೆಳಪು ರೈಲು ನಿಲ್ದಾಣದ ಬಗ್ಗೆ ಪ್ರಕಟಗೊಂಡ ವಿಶೇಷ ಲೇಖನದ ಪ್ರತಿಯನ್ನು ಸಚಿವ ಸೋಮಣ್ಣ ಅವರಿಗೆ ಹಸ್ತಾಂತರಿಸಿ, ರೈಲ್ವೇ ಇಲಾಖೆ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು.
ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕ್ತಾರೆ ಗೀತಾಂಜಲಿ ಎಂ. ಸುವರ್ಣ, ವಿವಿಧ ಜನಪ್ರತಿನಿಧಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.