Advertisement

ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆಯೂ ಜಲ ಸಂಪನ್ಮೂಲ ಇಲಾಖೆ ಯಲ್ಲಿನ  ವಿವಿಧ ಯೋಜನೆ ಗಳ ಕಾಮಗಾರಿಗಳಿಗೆ ವೇಗ ನೀಡುವ ಪ್ರಯತ್ನ ನಡೆಸಲಾ ಗಿದೆ. ಕಳೆದ ಭಾರೀ ಯೋಜನೆಗಳ ಕಾಮಗಾರಿ ಗಳಲ್ಲಿ ಶೇ.64 ರಷ್ಟು ಪ್ರಗತಿ ಸಾಧಿಸ ಲಾಗಿದ್ದು, ಹೊಸ ಯೋಜನೆಗಳ ಅನುಮತಿಗಾಗಿ ಸಚಿವ ರಮೇಶ್‌ ಜಾರಕಿಹೊಳಿ ದಿಲ್ಲಿ ಮಟ್ಟದಲ್ಲಿ ಹೆಚ್ಚಿನ ಕಸರತ್ತು ನಡೆಸಿದ್ದಾರೆ. ಆದರೆ ಬಹುದಿನಗಳಿಂದ ನಡೆಯುತ್ತಿರುವ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಸವಾಲು ಸಚಿವರ ಮುಂದಿದೆ.

Advertisement

ಕಳೆದ ಫೆಬ್ರವರಿಯಲ್ಲಿ ರಾಜ್ಯ ಜಲ ಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಮೇಶ ಜಾರಕಿಹೊಳಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ನಾಲ್ಕು ನೀರಾವರಿ ನಿಗಮಗಳೊಂದಿಗೆ ಸಮನ್ವಯ ಸಾಧಿಸಿ, ಯೋಜನಾ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅರಿಯುವ ಪ್ರಯತ್ನ ಮಾಡಿದ್ದಾರೆ.

ಎತ್ತಿನಹೊಳೆಗೆ ವೇಗ: ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಹಾಸನ, ತುಮಕೂರು ಜಿಲ್ಲೆಗಳ ಬರ ನೀಗಿಸಲು 2012ರಲ್ಲಿ ಆರಂಭವಾಗಿರುವ ಎತ್ತಿನ ಹೊಳೆ ಯೋಜನೆಯ ಕಾಮಗಾರಿಗೆ ವೇಗ ನೀಡುವ ಪ್ರಯತ್ನ ನಡೆಯಬೇಕಿದೆ.

ಈಗ ಆಗಬೇಕಿರುವುದೇನು ? :

  • ಮಹಾದಾಯಿ ಕುಡಿಯುವ ನೀರಿನ ಯೋಜನೆಗೆ ಅಧಿಕೃತ ಚಾಲನೆ ನೀಡಬೇಕಿದೆ.
  • ನಿಗದಿತ ಅವಧಿಯಲ್ಲಿ ಎತ್ತಿನಹೊಳೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು.
  • ನೀರಿನ ಸದ್ಬಳಕೆಗೆ ಮೈಕ್ರೋ ಇರಿಗೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು.

ಭದ್ರಾ ಯೋಜನೆಗೆ  ರಾಷ್ಟ್ರೀಯ ಮಾನ್ಯತೆ? :

Advertisement

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಕೇಂದ್ರ ಸರಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ. ಈ ಕುರಿತು ಶೀಘ್ರವೇ ಕೇಂದ್ರ ಸರಕಾರ ರಾಷ್ಟ್ರೀಯ ಯೋಜನೆ‌ಯನ್ನಾಗಿ ಘೋಷಿಸುವ ನಿರೀಕ್ಷೆಯಲ್ಲಿ ರಾಜ್ಯ ಸರಕಾರವಿದೆ.

 

ಶಂಕರ ಪಾಗೋಜಿ

Advertisement

Udayavani is now on Telegram. Click here to join our channel and stay updated with the latest news.

Next